ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದರು.
ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರಿಸಲಾಗಿದೆ ಎಂದು ಹೇಳಿದರು.
ಬಾಣಂತಿಯರ ಸಾವಿನ ಕುತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ.
ಬಾಣಂತಿಯರಿಗೆ ನೀಡಲಾಗಿರುವ ರಿಂಗರ್ ಲ್ಯಾಕ್ಟೇಟ್ ದ್ರಾವಣದ ಎಲ್ಲಾ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದರು.
ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಪ್ರಯೋಗಾಲಯದ ವರದಿ ಬಂದ ಬಳಿಕ ಘಟನೆಗೆ ಜವಾಬ್ದಾರರಾದ ಪ್ರತಿಯೊಬ್ಬರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಡ್ರಗ್ ಕಂಟ್ರೋಲರ್ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ ಎಂದರು.
ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಹಲವು ರೀತಿಯ ಗಂಭೀರ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…