ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಮತ್ತು ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ ಕಾರಣ ನೀಡಿ, ನಿನ್ನೆಯಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಲಾಗಿದೆ.
ಕಳೆದ ಒಂದೂವರೆ ವರ್ಷದಿಂದ ಬಳ್ಳಾರಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಶೋಭಾರಾಣಿ ವಿ.ಜೆ.ಅವರನ್ನು ಮಂಡ್ಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಲೋಕಾಯುಕ್ತದಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪವನ್ ನೆಜ್ಜೂರ್ ಅವರನ್ನು ಕಳೆದ ಡಿಸೆಂಬರ್ 31 ರಂದು ಬಳ್ಳಾರಿ ಎಸ್ ಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಇದೀಗ ಅಮಾನತುಗೊಂಡಿದ್ದಾರೆ…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಯಾವುದು ನ್ಯಾಯ...... ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ…
ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…
ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…
ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…
ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ,…