ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಸವಣ್ಣನವರು ಅನುಭವ ಮಂಟಪದಲ್ಲಿ ಸರ್ವ ಸಮುದಾಯವರಿಗೂ ಸಮಾನ ಅವಕಾಶ ನೀಡಿದರು ಎಂದು ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಾಮಾಜಿಕ ವ್ಯವಸ್ಥೆಯಲ್ಲಿನ ತಾರತಮ್ಯವನ್ನು ನಿವಾರಿಸುವ ಕಡೆಗೆ ಬಸವಣ್ಣನವರು ಮೊದಲ ಆದ್ಯತೆಯನ್ನು ನೀಡಿದರು. ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ ಬಸವಣ್ಣನವರ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿವೆ. ಬಸವಾದಿಶರಣರ ಚಿಂತನೆಗಳು ಭಾರತದ ಸಂವಿಧಾನದ ಆಶಯಗಳಿಗೆ ಪ್ರೇರಣೆಯಾಗಿವೆ ಎಂದರು.
ಜ್ಞಾನಗಂಗಾ ಪ್ರೌಢಶಾಲೆಯ ಶಿಕ್ಷಕ ಕೋದಂಡರಾಮ್ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಬಸವಣ್ಣನವರ ಕೊಡುಗೆ ಅಪಾರವಾಗಿದೆ. ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆ ವಚನ ಸಾಹಿತ್ಯವಾಗಿದೆ. ಬಸವಣ್ಣ ಅವರ ನೇತೃತ್ವದಲ್ಲಿ ವಚನಕಾರರು ತಮ್ಮ ವಚನಗಳಲ್ಲಿ ಸಾಮಾಜಿಕ ಹಾಗೂ ತಾತ್ವಿಕ ಮೌಲ್ಯಗಳನ್ನು ಪ್ರತಿಪಾದಿಸಿದರು ಎಂದರು.
ವಿಶ್ವ ಮಾನವತೆ ಮತ್ತು ವಿಶ್ವ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸಿದ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿದ್ದಾರೆ ಎಂದರು.
ನಿವೃತ್ತ ಮುಖ್ಯ ಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ಮಾತನಾಡಿ, ಬಸವಣ್ಣನವರು ವಚನಗಳ ಮೂಲಕ ಸಾಮಾಜಿಕ ಅರಿವು ನೀಡಿದರು. ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದ ಬಸವಣ್ಣನವರಿಗೆ ಸಮ ಸಮಾಜವನ್ನು ಕಟ್ಟುವ ಮುಖ್ಯ ಗುರಿ ಹೊಂದಿದ್ದರು. ಬಸವಣ್ಣನವರು ಕಟ್ಟಿದ ಜಾತ್ಯತೀತವಾದ ಸರ್ವಸಮಾನತೆಯ ವ್ಯವಸ್ಥೆಯನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂಬುದು ವಿಷಾದೀಯ ಸಂಗತಿಯಾಗಿದೆ. ಬಸವಣ್ಣನವರ ಆದರ್ಶಗಳನ್ನು, ಅವರ ವಚನಗಳ ವಿಚಾರಧಾರೆಯನ್ನು ಜನರು ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಉಂಟು ಮಾಡಲು ಸಾಧ್ಯವೆಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಷಫೀರ್, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಎಂ.ಸಿ.ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಪ್ರತಿನಿಧಿ ಷಫೀರ್, ಕಲಾವಿದರುಗಳಾದ ಬಾಶೆಟ್ಟಿಹಳ್ಳಿ ಮಂಜುನಾಥ್, ದರ್ಗಾಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…