ಬಸವಣ್ಣ ಚಿಂತನೆ ಎಲ್ಲಾ ಕಾಲಕ್ಕೂ ಮಾದರಿ – ಕನ್ನಡಪರ ಹೋರಾಟಗಾರ ಗುರುರಾಜಪ್ಪ

ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಸವಣ್ಣನವರು ಅನುಭವ ಮಂಟಪದಲ್ಲಿ ಸರ್ವ ಸಮುದಾಯವರಿಗೂ ಸಮಾನ ಅವಕಾಶ ನೀಡಿದರು ಎಂದು ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ  ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಮಾಜಿಕ ವ್ಯವಸ್ಥೆಯಲ್ಲಿನ ತಾರತಮ್ಯವನ್ನು ನಿವಾರಿಸುವ ಕಡೆಗೆ ಬಸವಣ್ಣನವರು ಮೊದಲ ಆದ್ಯತೆಯನ್ನು ನೀಡಿದರು. ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ ಬಸವಣ್ಣನವರ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿವೆ. ಬಸವಾದಿಶರಣರ ಚಿಂತನೆಗಳು ಭಾರತದ ಸಂವಿಧಾನದ ಆಶಯಗಳಿಗೆ ಪ್ರೇರಣೆಯಾಗಿವೆ ಎಂದರು.

ಜ್ಞಾನಗಂಗಾ ಪ್ರೌಢಶಾಲೆಯ ಶಿಕ್ಷಕ ಕೋದಂಡರಾಮ್ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಬಸವಣ್ಣನವರ ಕೊಡುಗೆ ಅಪಾರವಾಗಿದೆ. ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆ ವಚನ ಸಾಹಿತ್ಯವಾಗಿದೆ. ಬಸವಣ್ಣ ಅವರ ನೇತೃತ್ವದಲ್ಲಿ ವಚನಕಾರರು ತಮ್ಮ‌ ವಚನಗಳಲ್ಲಿ ಸಾಮಾಜಿಕ ಹಾಗೂ ತಾತ್ವಿಕ ಮೌಲ್ಯಗಳನ್ನು ಪ್ರತಿಪಾದಿಸಿದರು ಎಂದರು.

ವಿಶ್ವ ಮಾನವತೆ ಮತ್ತು ವಿಶ್ವ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸಿದ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿದ್ದಾರೆ ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ಮಾತನಾಡಿ, ಬಸವಣ್ಣನವರು ವಚನಗಳ ಮೂಲಕ ಸಾಮಾಜಿಕ ಅರಿವು ನೀಡಿದರು. ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದ ಬಸವಣ್ಣನವರಿಗೆ ಸಮ ಸಮಾಜವನ್ನು ಕಟ್ಟುವ ಮುಖ್ಯ ಗುರಿ ಹೊಂದಿದ್ದರು. ಬಸವಣ್ಣನವರು ಕಟ್ಟಿದ ಜಾತ್ಯತೀತವಾದ ಸರ್ವಸಮಾನತೆಯ ವ್ಯವಸ್ಥೆಯನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂಬುದು ವಿಷಾದೀಯ ಸಂಗತಿಯಾಗಿದೆ. ಬಸವಣ್ಣನವರ ಆದರ್ಶಗಳನ್ನು, ಅವರ ವಚನಗಳ ವಿಚಾರಧಾರೆಯನ್ನು ಜನರು ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಉಂಟು ಮಾಡಲು ಸಾಧ್ಯವೆಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಷಫೀರ್, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ  ಎಂ.ಸಿ.ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಪ್ರತಿನಿಧಿ ಷಫೀರ್, ಕಲಾವಿದರುಗಳಾದ ಬಾಶೆಟ್ಟಿಹಳ್ಳಿ ಮಂಜುನಾಥ್, ದರ್ಗಾಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

3.75 ಲಕ್ಷ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ: ಇ-ಕೆವೈಸಿಗೆ ಅ.20ರ ಗಡುವು: ಗಡುವು ವಿಸ್ತರಣೆಯಿಂದ ಫಲಾನುಭವಿಗಳಿಗೆ ಕೊಂಚ ನಿರಾಳ

ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…

9 hours ago

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

19 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

20 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

1 day ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

1 day ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

1 day ago