ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ, ಕಳುವಾಗಿದ್ದ ಸಂಪೂರ್ಣ ಹಣ ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆ ವಿವರ
ಡಿಸೆಂಬರ್ 8ರಂದು ಶ್ರೀ ವೆಂಕಟೇಶ್ವರ್ ರಾವ್ ಬಿನ್ ಸಾಂಬಶಿವರಾವ್ ಎಂಬುವವರು ಬೆಂಗಳೂರಿನ ಅಶ್ವತ್ಥನಗರ ಮಾರತ್ ಹಳ್ಳಿಯಲ್ಲಿ ಬಿಲ್ಡಿಂಗ್ ಮಾರಾಟ ಮಾಡಿದ್ದರು. ಈ ವ್ಯವಹಾರದ ಅಗ್ರಿಮೆಂಟ್ ಮಾಡಿಕೊಂಡಿದ್ದ ಖರೀದಿದಾರರಿಂದ 55 ಲಕ್ಷ ರೂ. ನಗದು ಹಾಗೂ ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡು ಬೆಂಗಳೂರಿನಿಂದ ಹೈದರಾಬಾದ್ ಗೆ ಹೋಗಲು ಕೆಎ 57-ಎಫ್ 3911 ನೋಂದಣಿ ಸಂಖ್ಯೆಯ ಅಂಬಾರಿ ಗ್ರೀನ್ ಕ್ಲಾಸ್ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು.
ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಅರೂರು ಬಳಿ ರಾತ್ರಿ 10 ಗಂಟೆ ಸುಮಾರಿಗೆ ಬಸ್ ನಿಲ್ಲಿಸಲಾಗಿತ್ತು. ಈ ವೇಳೆ ವೆಂಕಟೇಶ್ವರ್ ರಾವ್ ಅವರು ಊಟಕ್ಕಾಗಿ ಹೋಗಿ ವಾಪಸ್ ಬಂದು ನೋಡಿದಾಗ, ಬಸ್ಸಿನಲ್ಲಿಟ್ಟಿದ್ದ 55 ಲಕ್ಷ ರೂ. ಹಣ ಮತ್ತು ದಾಖಲೆಗಳಿದ್ದ ಬ್ಯಾಗ್ ಕಳವಾಗಿತ್ತು. ಕೂಡಲೇ ರಾತ್ರಿ 11 ಗಂಟೆಗೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖಾ ತಂಡವು ಕಳುವಾದ ಹಣವನ್ನು ಶೀಘ್ರವಾಗಿ ಪತ್ತೆಹಚ್ಚಲು ಕಾರ್ಯಪ್ರವೃತ್ತವಾಯಿತು. ಸ್ಥಳದಿಂದ ಆಂಧ್ರಪ್ರದೇಶದ ಗಡಿಭಾಗದವರೆಗೆ, ತುಮಕೂರು ಹಾಗೂ ಬೆಂಗಳೂರು ನಗರದ ವಿವಿಧೆಡೆ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು.
ಆರೋಪಿಗಳು ಮಧ್ಯಪ್ರದೇಶ ರಾಜ್ಯದ ಧಾರ್ ಜಿಲ್ಲೆಯವರು ಎಂದು ತಿಳಿದುಬಂದ ಹಿನ್ನೆಲೆಯಲ್ಲಿ, ಗುಡಿಬಂಡೆ ವೃತ್ತದ ಅಪರಾಧ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿ ತಂಡ ಮಧ್ಯಪ್ರದೇಶಕ್ಕೆ ತೆರಳಿ ಆರೋಪಿಗಳನ್ನ ಬಂಧಿಸಿತು.
ಈ ಪ್ರಕರಣದಲ್ಲಿ ಆರೋಪಿಗಳಾದ ಎ-1 ಅಸ್ಲಂ ಖಾನ್ ಬಿನ್ ಆಲಿಖಾನ್, ಎ-2 ಮುನೀರ್ ಖಾನ್ ಬಿನ್ ಬಾಬುಖಾನ್ ಎ-3 ಅಬ್ಯಾಖಾನ್ ಬಿನ್ ಆಲಿಖಾನ್, ಎ-4 ಶೇರು ಬಿನ್ ಪಪ್ಪು ರನ್ನ ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ ಕಳುವಾಗಿದ್ದ 55 ಲಕ್ಷ ರೂ. ನಗದು ಹಾಗೂ ಬಿಲ್ಡಿಂಗ್ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…