ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಈ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳು ಅರ್ಧ ದಾರಿಯಲ್ಲೇ ಕೈಕೊಡುತ್ತಿರುವ ಪರಿಣಾಮ, ಟಿಕೆಟ್ ಪಡೆದು ಪ್ರಯಾಣ ಆರಂಭಿಸಿದ ಪ್ರಯಾಣಿಕರು ಗಮ್ಯಸ್ಥಾನ ತಲುಪಲಾಗದೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಬಸ್ ಕೆಟ್ಟು ನಿಂತ ಬಳಿಕ ಮುಂದಿನ ಬಸ್‌ಗಾಗಿ ಗಂಟೆಗಟ್ಟಲೆ ಕಾಯಬೇಕಾಗುತ್ತಿದ್ದು, ಕೆಲವರು ಅನಿವಾರ್ಯವಾಗಿ ಖಾಸಗಿ ವಾಹನಗಳ ಮೊರೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ.
ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಇದರಿಂದ ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ಬಸ್ ಮಾರ್ಗಮಧ್ಯೆ ಕೆಟ್ಟು ನಿಂತರೆ ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ, ಕಚೇರಿಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಕೋರ್ಟ್, ಸರ್ಕಾರಿ ಕಚೇರಿ, ಆಸ್ಪತ್ರೆ ಸೇರಿದಂತೆ ವಿವಿಧ ಕೆಲಸಗಳಿಗೆ ನಿಗದಿತ ಸಮಯಕ್ಕೆ ತೆರಳಬೇಕಾದ ಸಾರ್ವಜನಿಕರೂ ಪರದಾಡುವಂತಾಗಿದೆ.
‘ಟಿಕೆಟ್ ಪಡೆದ ಸ್ಥಳದಿಂದ ಗಮ್ಯಸ್ಥಾನಕ್ಕೆ ತಲುಪಿಸುವ ಜವಾಬ್ದಾರಿ ಸಾರಿಗೆ ಇಲಾಖೆಯದ್ದು. ಆದರೆ ಬಸ್ ಅರ್ಧ ದಾರಿಯಲ್ಲೇ ಕೆಟ್ಟು ನಿಂತರೆ ಪ್ರಯಾಣಿಕರ ಪರಿಸ್ಥಿತಿ ಏನು?’ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಈ ಸಮಸ್ಯೆ ಹೊಸದಲ್ಲ. ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗಕ್ಕೆ ಉತ್ತಮ ಸ್ಥಿತಿಯಲ್ಲಿರುವ ಬಸ್‌ಗಳನ್ನು ನಿಯೋಜಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಸಮಸ್ಯೆ ಮುಂದುವರಿದಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
ಹಳೆಯ ಹಾಗೂ ಪದೇ ಪದೇ ತಾಂತ್ರಿಕ ದೋಷಕ್ಕೆ ಒಳಗಾಗುವ ಬಸ್‌ಗಳ ಬದಲಿಗೆ ಸುಸ್ಥಿತಿಯಲ್ಲಿರುವ ಬಸ್‌ಗಳನ್ನು ಈ ಮಾರ್ಗಕ್ಕೆ ನಿಯೋಜಿಸಬೇಕು. ಬಸ್‌ಗಳ ನಿಯಮಿತ ನಿರ್ವಹಣೆ ಕೈಗೊಳ್ಳಬೇಕು. ಮಾರ್ಗಮಧ್ಯೆ ಬಸ್ ಕೆಟ್ಟು ನಿಂತ ಸಂದರ್ಭದಲ್ಲಿ ಪ್ರಯಾಣಿಕರಿಗೆ ಪರ್ಯಾಯ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯನ್ನು ಅವಲಂಬಿಸಿರುವ ಗ್ರಾಮಗಳ ವಿದ್ಯಾರ್ಥಿಗಳು, ರೈತರು, ಕಾರ್ಮಿಕರು, ಉದ್ಯೋಗಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ಇಲಾಖೆ ಕೂಡಲೇ ಕ್ರಮ ಕೈಗೊಂಡು ನಂಬಿಕೆಯಿಂದ ಪ್ರಯಾಣಿಸಬಹುದಾದ ಉತ್ತಮ ಬಸ್ ಸೇವೆ ಒದಗಿಸಬೇಕು ಎಂದು ಯುವಕ ರವಿಕುಮಾರ್ ಅವರ ಆಗ್ರಹವಾಗಿದೆ.
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…