ಮೇಲಿನಜೂಗಾನಹಳ್ಳಿ- ದೊಡ್ಡಬಳ್ಳಾಪುರ ಮಾರ್ಗದಲ್ಲಿ ಬೆಳಗ್ಗೆ 8ಗೆ ಸಂಚರಿಸುವ ಕೆಎಸ್ಆರ್ ಟಿಸಿ ಬಸ್ ಪ್ರತಿದಿನ ಫುಲ್ ರಶ್ ಆಗಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದ್ದು, ಹಲವು ಬಾರಿ ಹೆಚ್ಚುವರಿ ಬಸ್ ಬಿಡುವಂತೆ ಕೆಎಸ್ಆರ್ ಟಿಸಿ ಘಟಕದ ವ್ಯವಸ್ಥಾಪಕರಿಗೆ ಮನವಿ ಮಾಡಿದರು ಉಪಯೋಗವಾಗದ ಹಿನ್ನೆಲೆ ಇಂದು ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.
ಮೇಲಿನಜೂಗಾನಹಳ್ಳಿಯಿಂದ ಪಾಲ್ ಪಾಲ್ ದಿನ್ನೆ ಗ್ರಾಮಕ್ಕೆ ಬರುವಷ್ಟರಲ್ಲಿ ಬಸ್ ಫುಲ್ ರಶ್ ಆಗಿರುತ್ತದೆ. ಈ ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ಹತ್ತಲು ಜಾಗ ಇರೋದಿಲ್ಲ. ಇಲ್ಲಿನ ವಿದ್ಯಾರ್ಥಿಗಳು ಅವಧಿಯೊಳಗೆ ಶಾಲಾ-ಕಾಲೇಜುಗಳಿಗೆ ತರೆಳಲು ಆಗದೆ ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು. ಹೆಚ್ಚುವರಿ ಬಸ್ ಬಿಡಲು ಒತ್ತಾಯಿಸಿ ಹಲವು ಬಾರಿ ಮನವಿ ಸಲ್ಲಿಸಿದರೂ ಸಾರಿಗೆ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರೊಂದಿಗೆ ಬಸ್ ತಡೆದು ಪ್ರತಿಭಟನೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಸಾರಿಗೆ ಇಲಾಖಾ ಅಧಿಕಾರಿಗಳು ಬಂದು ಹೆಚ್ಚುವರಿ ಬಸ್ ಬಿಡುತ್ತೇವೆ ಎಂದು ಹೇಳುವವರೆಗೂ ಮೇಲೆ ಎದ್ದೇಳುವುದಿಲ್ಲ ಎಂದು ಪಟ್ಟುಹಿಡಿದು ಧರಣಿ ನಡೆಸುತ್ತಿದ್ದಾರೆ.