ಬಸ್ ಫುಲ್ ರಶ್: ಹೆಚ್ಚುವರಿ ಬಸ್ ಗಾಗಿ ಆಗ್ರಹಿಸಿ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಮೇಲಿನಜೂಗಾನಹಳ್ಳಿ- ದೊಡ್ಡಬಳ್ಳಾಪುರ ಮಾರ್ಗದಲ್ಲಿ ಬೆಳಗ್ಗೆ 8ಗೆ ಸಂಚರಿಸುವ ಕೆಎಸ್ಆರ್ ಟಿಸಿ ಬಸ್ ಪ್ರತಿದಿನ ಫುಲ್ ರಶ್ ಆಗಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದ್ದು, ಹಲವು ಬಾರಿ ಹೆಚ್ಚುವರಿ ಬಸ್ ಬಿಡುವಂತೆ ಕೆಎಸ್ಆರ್ ಟಿಸಿ ಘಟಕದ ವ್ಯವಸ್ಥಾಪಕರಿಗೆ ಮನವಿ‌ ಮಾಡಿದರು ಉಪಯೋಗವಾಗದ ಹಿನ್ನೆಲೆ ಇಂದು ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.

ಮೇಲಿನಜೂಗಾನಹಳ್ಳಿಯಿಂದ ಪಾಲ್ ಪಾಲ್ ದಿನ್ನೆ ಗ್ರಾಮಕ್ಕೆ ಬರುವಷ್ಟರಲ್ಲಿ ಬಸ್ ಫುಲ್ ರಶ್ ಆಗಿರುತ್ತದೆ. ಈ ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ಹತ್ತಲು ಜಾಗ ಇರೋದಿಲ್ಲ. ಇಲ್ಲಿನ ವಿದ್ಯಾರ್ಥಿಗಳು ಅವಧಿಯೊಳಗೆ ಶಾಲಾ-ಕಾಲೇಜುಗಳಿಗೆ ತರೆಳಲು ಆಗದೆ ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು. ಹೆಚ್ಚುವರಿ ಬಸ್ ಬಿಡಲು ಒತ್ತಾಯಿಸಿ ಹಲವು ಬಾರಿ ಮನವಿ ಸಲ್ಲಿಸಿದರೂ ಸಾರಿಗೆ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರೊಂದಿಗೆ ಬಸ್ ತಡೆದು ಪ್ರತಿಭಟನೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಸಾರಿಗೆ ಇಲಾಖಾ ಅಧಿಕಾರಿಗಳು ಬಂದು ಹೆಚ್ಚುವರಿ ಬಸ್ ಬಿಡುತ್ತೇವೆ ಎಂದು ಹೇಳುವವರೆಗೂ‌ ಮೇಲೆ ಎದ್ದೇಳುವುದಿಲ್ಲ ಎಂದು ಪಟ್ಟು‌ಹಿಡಿದು ಧರಣಿ ನಡೆಸುತ್ತಿದ್ದಾರೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

9 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

9 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

12 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

12 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

22 hours ago