ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ ಮೇಲೆ ಆಟೋ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಬಾಲಕನನ್ನು ಸಂಜೀವಕುಮಾರ್ (6) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ ವೇಳೆ ವೇಗವಾಗಿ ಬಂದ ಆಟೋ ಚಾಲಕ ವೀರಪ್ಪ ನಿಯಂತ್ರಣ ಕಳೆದುಕೊಂಡು ಬಾಲಕನಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಆಟೋ ಬಾಲಕನ ಮೇಲೆಯೇ ಹರಿದ ಪರಿಣಾಮ ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಚಿಂಚೋಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆಟೋ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಂಡು ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

42 minutes ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

3 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

3 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

5 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

10 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

1 day ago