ಬಾಂಗ್ಲಾದೇಶದಲ್ಲಿ ಮೀಸಲಾತಿ ಸಂಘರ್ಷ ತಾರಕಕ್ಕೇರಿದೆ. ಸರ್ಕಾರ ವಿರೋಧಿ ಹೋರಾಟ ಹಿಂಸಾರೂಪಕ್ಕೆ ತಿರುಗಿದೆ. ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಅದೇರೀತಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆ ಪ್ರಧಾನಿ ಶೇಖ್ ಹಸೀನಾ ದೇಶ ತೊರೆದು ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೆಲಿಕಾಪ್ಟರ್‌ನಲ್ಲಿ ತಮ್ಮ ಸಹೋದರಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಪರಾರಿಯಾಗಿದ್ದು, ಸೇನಾ ವಿಮಾನ ಹಾರಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಪ್ರತಿಭಟನಾ ನಿರತರು ನೇರವಾಗಿ ಬಾಂಗ್ಲಾದೇಶ ಪ್ರಧಾನಿಗಳ ಪ್ಯಾಲೆಸ್ ಗೆ ನುಗ್ಗಿದ್ದಾರೆ. ಮತ್ತೊಂದೆಡೆ ಪ್ರತಿಭಟನಾಕಾರರು ನುಗ್ಗುವ ಮುನ್ನವೇ ಅಪಾಯದ ಮುನ್ಸೂಚನೆ ಪಡೆದ ಶೇಖ್ ಹಸೀನಾ ಸೇನಾ ವಿಮಾನದಲ್ಲಿ ದೇಶ ತೊರೆದಿದ್ದಾರೆ ಎನ್ನಲಾಗಿದೆ.