ಬಾಂಗ್ಲಾದೇಶದಲ್ಲಿ ತಾರಕಕ್ಕೇರಿದ ಮೀಸಲಾತಿ ಸಂಘರ್ಷ: ಪ್ರಧಾನಿ ಹುದ್ದೆಗೆ ರಾಜಿನಾಮೆ ಕೊಟ್ಟು ದೇಶ ತೊರೆದ ಶೇಖ್‌ ಹಸೀನಾ..?

ಬಾಂಗ್ಲಾದೇಶದಲ್ಲಿ ಮೀಸಲಾತಿ ಸಂಘರ್ಷ ತಾರಕಕ್ಕೇರಿದೆ. ಸರ್ಕಾರ ವಿರೋಧಿ ಹೋರಾಟ ಹಿಂಸಾರೂಪಕ್ಕೆ ತಿರುಗಿದೆ. ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಅದೇರೀತಿ ಪ್ರಧಾನಿ ಶೇಖ್‌ ಹಸೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆ  ಪ್ರಧಾನಿ ಶೇಖ್ ಹಸೀನಾ ದೇಶ ತೊರೆದು ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ಶೇಖ್‌ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೆಲಿಕಾಪ್ಟರ್‌ನಲ್ಲಿ ತಮ್ಮ ಸಹೋದರಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಪರಾರಿಯಾಗಿದ್ದು, ಸೇನಾ ವಿಮಾನ ಹಾರಾಡುತ್ತಿರುವ ವಿಡಿಯೋ ಸಾಮಾಜಿಕ‌ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪ್ರತಿಭಟನಾ ನಿರತರು ನೇರವಾಗಿ ಬಾಂಗ್ಲಾದೇಶ ಪ್ರಧಾನಿಗಳ ಪ್ಯಾಲೆಸ್ ಗೆ ನುಗ್ಗಿದ್ದಾರೆ. ಮತ್ತೊಂದೆಡೆ ಪ್ರತಿಭಟನಾಕಾರರು ನುಗ್ಗುವ ಮುನ್ನವೇ ಅಪಾಯದ ಮುನ್ಸೂಚನೆ ಪಡೆದ ಶೇಖ್ ಹಸೀನಾ ಸೇನಾ ವಿಮಾನದಲ್ಲಿ ದೇಶ ತೊರೆದಿದ್ದಾರೆ ಎನ್ನಲಾಗಿದೆ.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

5 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

5 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

5 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

5 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

9 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

12 hours ago