ದೊಡ್ಡಬಳ್ಳಾಪುರ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಆಕ್ರಮಣಗಳನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ತಾಲೂಕು ಕಚೇರಿ ವೃತ್ತದಲ್ಲಿಂದು ಪ್ರತಿಭಟನೆ ನಡೆಸಲಾಯಿತು.
ದೊಡ್ಡಬಳ್ಳಾಪುರದ ಹಳೇ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೆ ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ರ್ಯಾಲಿ ಹಾಗೂ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ನಂತರ ಹಿಂದುಗಳಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿ ತಾಲೂಕು ಆಡಳಿತ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ನೀಡಲಾಯಿತು.