ಬಾಕಿ ರೈತರ ರಾಗಿ ನೋಂದಣಿಗೆ ಅವಕಾಶ ನೀಡುವಂತೆ ಒತ್ತಾಯ: ರಾಗಿ ಖರೀದಿ ಕೇಂದ್ರದ ಮುಂದೆ ರೈತ ಸಂಘದಿಂದ ಪ್ರತಿಭಟನೆ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡುತ್ತಿರುವ ಸರ್ಕಾರ, ರೈತರಿಂದ ನೋಂದಣಿ ಪ್ರಕ್ರಿಯೆ ಮಾಡಿಸಿಕೊಂಡಿದೆ. ಆದರೆ, ತಾಲ್ಲೂಕಿನಲ್ಲಿ ಇನ್ನೂ ಒಂದೂವರೆ ಸಾವಿರ ರೈತರು ನೋಂದಣಿ ಮಾಡಿಸಿಕೊಳ್ಳಬೇಕಿದೆ. ಅಂತಹ ರೈತರಿಂದ ನೋಂದಣಿ ಮಾಡಿಸಿಕೊಳ್ಳದೆ ನೋಂದಣಿ ಪ್ರಕ್ರಿಯೆಯನ್ನ ಸ್ಥಗಿತಗೊಳಿಸಿರುವುದನ್ನ ಖಂಡಿಸಿ ರೈತ ಸಂಘದಿಂದ‌ ನಗರದ ಎಪಿಎಂಸಿ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರದ ಮುಂದೆ ಶುಕ್ರವಾರ ಪ್ರತಿಭಟನೆ ಮಾಡಲಾಯಿತು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ ಮಾತನಾಡಿ, ಈ ಬಾರಿ ಮಳೆ ತಡವಾಗಿದ್ದರಿಂದ ರೈತರು ರಾಗಿ ಬೆಳೆಯಬೇಕೋ ಬೇಡವೋ ಎಂಬ ಜಿಜ್ಞಾಸೆಯಲ್ಲಿದ್ದರು. ಆದರೆ, ಅಕ್ಟೋಬರ್ ಅಂತ್ಯಕ್ಕೆ ಸುರಿದ ಉತ್ತಮ ಮಳೆಯಿಂದ ರಾಗಿ ಇಳುವರಿ ಚೆನ್ನಾಗಿ ಬಂದಿದೆ. ಆದರೆ, ತಡವಾಗಿ ಬೆಳೆ ಬಂದಿದೆ. ಇತ್ತ ಸರ್ಕಾರ ರೈತರಿಂದ ಖರೀದಿ ಮಾಡಲು ನೋಂದಣಿಗೆ ದಿನಾಂಕ ಘೋಷಣೆ ಮಾಡಿತ್ತು. ಈ ಅವಧಿಯಲ್ಲಿ ಬೆಳೆ ಸಂಪೂರ್ಣವಾಗದೆ ಹಲವು ರೈತರು ನೋಂದಣಿ ಮಾಡಿಸಿಕೊಂಡಿರಲಿಲ್ಲ. ಮಳೆಯ ಕೃಪೆಯಿಂದ ಉತ್ತಮವಾಗಿ ಬೆಳೆ ಬಂದಿದೆ. ಈಗ ರೈತರು ನೋಂದಣಿ ಮಾಡಲು ಅವಕಾಶ ಇಲ್ಲದಂತಾಗಿದೆ. ಹೀಗಾಗಿ ನೋಂದಣಿಯಾಗದ ರೈತರಿಗೆ ಮತ್ತೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.

ಸ್ಥಳಕ್ಕೆ ಬಂದ ತಹಶೀಲ್ದಾರ್ ಮಲ್ಲಪ್ಪ ರೈತರ ಅಹವಾಲನ್ನು ಸ್ವೀಕರಿಸಿ ಸರ್ಕಾರದ ಈ ವರ್ಷದ ಖರೀದಿ ಪ್ರಮಾಣದ ಗುರಿಯನ್ನ ಈಗಾಗಲೇ ತಲುಪಲಾಗಿದೆ. ನೋಂದಣಿ ಪ್ರಕ್ರಿಯೆ ಮತ್ತೆ ಆರಂಭವಾಗಬೇಕಾದರೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ಸದ್ಯಕ್ಕೆ ಯಾವ ರೈತರಿಂದ ಎಷ್ಟು ಪ್ರಮಾಣದಲ್ಲಿ ರಾಗಿ ಇದೆ ಎಂಬುದರ ಮಾಹಿತಿಯನ್ನು ನನಗೆ ನೀಡಿ ಬಳಿಕ ನಾನು ಜಿಲ್ಲಾಧಿಕಾರಿಗಳು ಮತ್ತು ಆಹಾರ ಸಚಿವರ ಗಮನಕ್ಕೆ ತಂದು ಸರ್ಕಾರಕ್ಕೆ ಇಲ್ಲಿನ ರೈತರ ಸಮಸ್ಯೆಯನ್ನು ವರದಿ ನೀಡುವ ಕೆಲಸ ಮಾಡುತ್ತೇನೆ ಎಂದರು.

ತಹಶೀಲ್ದಾರ್ ರವರ ಭರವಸೆಗೆ ಮನ್ನಣೆ ನೀಡಿದ ರೈತರು ಪ್ರತಿಭಟನೆಯನ್ನ ವಾಪಸ್ ಪಡೆದರು.

ಈ ವೇಳೆ ತಹಶೀಲ್ದಾರ್ ಮಲ್ಲಪ್ಪ, ಆಹಾರ ಇಲಾಖೆಯ ಉಪನಿರ್ದೇಶಕ ಪ್ರಕಾಶ್, ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ತಾಲ್ಲೂಕು ಪ್ರಧಾನಕಾರ್ಯದರ್ಶಿ ಸತೀಶ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 hour ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

4 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

6 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

19 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

22 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago