ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ ಎಂದು ಹೇಳಿದ್ದಾರೆ.

ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ‌ ಮೊದಲ ಆದ್ಯತೆ. ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!