ನೆಲಮಂಗಲ ಸಮೀಪದ ಪ್ರಸಿದ್ಧ ಬಾಗಲಗುಂಟೆ ಮಾರಮ್ಮ ದೇವಲಯದ ಬೀಗ ಹೊಡೆದು ಹುಂಡಿ ಹಣ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ದೇವಾಲಯದ ಎರಡು ಹುಂಡಿಯಲ್ಲಿದ್ದ ಅಂದಾಜು 2 ಲಕ್ಷಕ್ಕೂ ಹೆಚ್ಚು ಹಣ ಕಳ್ಳತನ ನಡೆದಿದೆ. ಅರ್ಚಕ ಮಹೇಂದ್ರ ಅವರು ಬೆಳಗ್ಗೆ ಪೂಜೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಬಾಗಲಗುಂಟೆ ಪೊಲೀಸರಿಂದ ತನಿಖಾ ಕಾರ್ಯ ನಡೆಯುತ್ತಿದೆ.
ದೇವಾಲಯಕ್ಕೆ ಸೂಕ್ತ ಭದ್ರತೆ ಕಲ್ಪಿಸದ ತಹಸಿಲ್ದಾರ್ ವಿರುದ್ಧ ಗ್ರಾಮಸ್ಥರ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಮುಜರಾಯಿ ಇಲಾಖೆ ಸುಪರ್ದಿಯಲ್ಲಿ ಮಾರಮ್ಮ ದೇವಾಲಯ ಇದ್ದು, ರಾತ್ರಿ ವೇಳೆ ಪೊಲೀಸ್ ಬೀಟ್ ಹೆಚ್ಚಿಸುವಂತೆ ಗ್ರಾಮಸ್ಥರ ಮನವಿ ಮಾಡಿದ್ದಾರೆ.
ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.