ನಾಗ್ಪುರ : ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಅತ್ಯಂತ ರೋಚಕತೆಯಿಂದ ಕೂಡಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ಮಾಜಿ ಹಾಗೂ ಹಾಲಿ ಆಟಗಾರರ ಮಾತುಗಳ ನಡುವೆಯೇ ಭಾರತ ತಂಡ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 132 ರನ್ ಜಯಗಳಿಸುವ ಮೂಲಕ ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಪ್ರಾರಂಭಿಸಿದ ಪ್ರವಾಸಿ ತಂಡ ಮೊದಲ ಇನಿಂಗ್ಸ್ ನಲ್ಲಿ ಬೇಗನೇ ವಿಕೆಟ್ ಕಳೆದುಕೊಂಡರು, ಆಸೀಸ್ ತಂಡದ ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ಲಭುಶನಗೆ (49), ಮಾಜಿ ನಾಯಕ ಸ್ಟೀವನ್ ಸ್ಮಿತ್ (37), ಹ್ಯಾಂಗ್ ಕೂಮ್ (31) ಆಲಕ್ಸ್ ಹ್ಯಾರಿ (36) ರನ್ ಗಳಿಸಿ ತಂಡದ ಮೊತ್ತ 177 ರನ್ ತಲುಪಲು ನೆರವಾದರು.
ಭಾರತದ ತಂಡದ ಬೌಲಿಂಗ್ ಪಡೆಯಲ್ಲಿ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಮೊದಲಿಗೆ ವಿಕೆಟ್ ಕಬಳಿಸಿದರೆ ನಂತರ ಬಂದ ಸ್ಪಿನ್ ಜೋಡಿ ಆಲ್ ರೌಂಡರ್ ರವೀಂದ್ರ ಜಡೇಜಾ 5 ವಿಕೆಟ್ ಗೊಂಚಲು ಪಡೆದರೆ, ಆರ್. ಅಶ್ವಿನ್ 3 ವಿಕೆಟ್ ಪಡೆಯುವ ಮೂಲಕ ಭಾರತದ ಪರವಾಗಿ 450 ವಿಕೆಟ್ ಪಡೆದ ಸಾಧನೆ ಮಾಡಿದರು.
ಇನ್ನಿಂಗ್ಸ್ ಗೆ ವೇಗ ನೀಡಿದ ನಾಯಕ ರೋಹಿತ್ ಶರ್ಮಾ ಶತಕ (120) ರನ್ ಸಿಡಿಸಿ ತಂಡಕ್ಕೆ ನೆರವಾದರು, ಆರ್. ಅಶ್ವಿನ್ (23), ಆಲ್ ರೌಂಡರ್ ರವೀಂದ್ರ ಜಡೇಜಾ (70), ಅಕ್ಷರ್ ಪಟೇಲ್ (84), ಮೊಹಮ್ಮದ್ ಶಮಿ (37) ರನ್ ಸಿಡಿಸಿದ್ದರ ಫಲವಾಗಿ ತಂಡ 400 ರನ್ ಗಳಿಸಿತು. ಮೊದಲ ಪಂದ್ಯದಲ್ಲಿಯೇ 7 ವಿಕೆಟ್ ಪಡೆದ ಮಪಿ೯ ಗಮನ ಸೆಳೆದರು.
ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಪಡೆಯನ್ನು ಪೆವಿಲಿಯನ್ ಗೆ ಪೆರೆಡ್ ನಡೆಸಿದ ಕೀರ್ತಿ ಸ್ಪಿನ್ನರ್ ಗಳಿಗೆ ಸಲ್ಲಬೇಕು, ಮಾಜಿ ನಾಯಕ ಸ್ಟೀವನ್ ಸ್ಮಿತ್ (25) ರನ್ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟ್ಸ್‌ಮನ್ ಪ್ರತಿರೋಧ ತೋರಲಿಲ್ಲ, ಆರ್. ಅಶ್ವಿನ್ 5 ವಿಕೆಟ್ ಗೊಂಚಲು ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…