ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್ ಬಾಯ್ತೆರೆದು, ಮಲಮಿಶ್ರಿತ ಕೊಳಚೆ ನೀರು ರಸ್ತೆ ಹಾಗೂ ಮನೆಯ ಮುಂದೆ ಹರಿಯುತ್ತಿರುವುದರಿಂದ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.
ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಹಿನ್ನೆಲೆ, ಸ್ಥಳದಲ್ಲಿ ಪಾದಾಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು ಏನೂ ಪ್ರಯೋಜನವಾಗಿಲ್ಲ. ಮನೆಯ ಮುಂದೆ ಕಾಲಿಟ್ಟರೆ ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನ ದುರ್ವಾಸನೆಯಿಂದಾಗಿ ಜನರು ಬೇಸತ್ತಿದ್ದಾರೆ. ಮನೆಯ ಮುಂದೆ ಮ್ಯಾನ್ ಹೋಲ್ ನೀರು ಹರಿಯುತ್ತಿರುವ ಕಾರಣ ಸಾವಿರಾರು ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದು ಹೀಗೆ ಬಿಟ್ಟರೆ ಎಲ್ಲರಿಗೂ ಕಾಲಯಿಲೆ ಬರುವುದು ಖಚಿತ ಎಂದು ಇಲ್ಲಿನ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಕೂಡಲೇ ಮ್ಯಾನ್ ಹೋಲ್ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…