ಬಾಲಕಾರ್ಮಿಕರನ್ನು ರಕ್ಷಿಸಲು ಹೆಚ್ಚು ಹೆಚ್ಚು ಅನಿರೀಕ್ಷಿತ ದಾಳಿಗೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆಮಾಡಿ ಪುನರ್ವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್‌ ಸಮಿತಿಗಳನ್ನು ರಚಿಸಲಾಗಿದ್ದು, ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಸೂಚನೆ ನೀಡಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಬಾಲ ಕಾರ್ಮಿಕ ಪದ್ದತಿ ನಿವಾರಣೆ ಕುರಿತು ನಡೆದ ಸಭೆಯಲ್ಲಿ ‌ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಗೆ ಹೊಂದಿಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ಅಂಗಡಿ ಮುಂಗಟ್ಟುಗಳು ಹೆಚ್ಚಾಗಿರುವುದರಿಂದ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ ಇಲಾಖೆ ಸೇರಿದಂತೆ ಒಟ್ಟು 11 ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಅನಿರೀಕ್ಷಿತ ದಾಳಿ,ತಪಾಸಣೆ ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸಲು ಕಾರ್ಮಿಕ ಇಲಾಖೆಗೆ ಸಹಕರಿಸುವಂತೆ ಹಾಗೂ ರಕ್ಷಿಸಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಶಾಲೆಗೆ ದಾಖಲು ಮಾಡುವ ಮೂಲಕ ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಗಳ ವರೆಗೆ ಹೆಚ್ಚಿಸಬಹುದಾದಂತಹ ದಂಡ ಅಥವಾ ಎರಡನ್ನು ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ತಿಳಿಸಿದರು.

ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯ ವೇಳೆ ವಿವಿಧ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ, ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜುಗಳಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು, ಆಟೊ ಪ್ರಚಾರ ಕಾರ್ಯಕ್ರಮಗಳನ್ನು, ಬೀದಿ ನಾಟಕಗಳನ್ನು, ಗೋಡೆ ಬರಹಗಳನ್ನು, ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು, ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕೆಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ. ಹೆಚ್.ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಶ್ರೀಕಂಠ.ಎನ್, ದೇವನಹಳ್ಳಿ ತಹಸೀಲ್ದಾರ್ ಶಿವರಾಜ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬರಾವ್.ಎಸ್ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ನಾಲ್ಕು ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರು ಸೇರಿದಂತೆ ಮತ್ತಿತರು ಹಾಜರಿದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

6 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

8 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

8 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

10 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

11 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

16 hours ago