
ಬೆಂಗಳೂರು ನಗರದ ಸೇಂಟ್ ಮೇರಿಸ್ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ತೇಜಸ್ವಿನಿ ಜಿ. ರಾವ್ ಅವರು ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಯ ಬಾಲಕಿಯರ ಶಾಟ್ಪಟ್ನಲ್ಲಿ ಚಿನ್ನದ ಸಾಧನೆ ಮಾಡಿದರು.
ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ತೇಜಸ್ವಿನಿ 12.34 ಮೀಟರ್ ಸಾಧನೆಯೊಂದಿಗೆ ಅಗ್ರಸ್ಥಾನಿಯಾದರು. ಈಕೆ ಪೊಲೀಸ್ ಅಧಿಕಾರಿ ಗಣೇಶ್ ಜನಾರ್ದನ್ ರಾವ್ ಅವರ ಪುತ್ರಿಯಾಗಿದ್ದಾರೆ.