ಹುಲಿಯೂರು ದುರ್ಗಾ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೋಕ್ಸೋ ನ್ಯಾಯಾಲಯ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 2 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ರಾಮಚಂದ್ರಯ್ಯ (55), ಹೊಸವೀರಾಮಯ್ಯ (60) ಮತ್ತು ವೆಂಕಟೇಶಯ್ಯ (40) ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾರೆ. ಬಾಲಕಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದು ಬಂದಿತ್ತು.
ಈ ಕುರಿತು ಕುಣಿಗಲ್ ತಾಲೂಕು ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ರಾಮಚಂದ್ರಯ್ಯ ಬೆಳಗಿನ ಉಪಾಹಾರಕ್ಕೆ ಹಣ ನೀಡುವುದಾಗಿ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನು ಕಂಡ ಹೊಸವೀರಾಮಯ್ಯ ಊರಿನವರಿಗೆ ತಿಳಿಸುವುದಾಗಿ ಬೆದರಿಸಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನು ಗಮನಿಸಿದ ಮತ್ತೋರ್ವ ಆರೋಪಿ ವೆಂಕಟೇಶಯ್ಯನೂ ಕೂಡ ಬಾಲಕಿ ಮೇಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಹುಲಿಯೂರುದುರ್ಗ ತನಿಖಾಧಿಕಾರಿ ಎ.ಎನ್. ಅಶೋಕ್ ಕುಮಾರ್ ಪ್ರಕರಣದ ತನಿಖೆ ನಡೆಸಿದಾಗ, ಈ ಎಲ್ಲ ವಿಷಯಗಳು ಬೆಳಕಿಗೆ ಬಂದಿವೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ ಅಪರಾಧಿಗಳಿಗೆ ಶಿಕ್ಷೆ ವಿಧಿಸಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬಾಲಕಿಗೆ 10 ಲಕ್ಷ ರೂ. ಸೇರಿದಂತೆ ಒಟ್ಟು 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…