ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿರುವ ಕುರಿತು ಮಕ್ಕಳ ಸಹಾಯವಾಣಿ 1098ಕ್ಕೆ ಅಪರಿಚಿತ ವ್ಯಕ್ತಿಯಿಂದ ದೂರು ದಾಖಲಾಗಿತ್ತು. ದೂರು ಸ್ವೀಕರಿಸುತ್ತಿದ್ದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ದೌಡಾಯಿಸಿದರು.
ಮದುವೆಯ ಸಿರೆಪ್ಷನ್ ಕಾರ್ಯಕ್ರಮ ಮುಗಿದು ಬಳೆ ಶಾಸ್ತ್ರ ನಡೆಯುತ್ತಿದ್ದ ವೇಳೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಶಾಲಾ ದಾಖಲಾತಿಗಳ ಪ್ರಕಾರ ಬಾಲಕಿಗೆ ಕೇವಲ 16 ವರ್ಷ ವಯಸ್ಸು ಇರುವುದಾಗಿ ದೃಢಪಟ್ಟಿದೆ. ಬಳಿಕ ಮದುವೆ ಕಾರ್ಯವನ್ನು ತಡೆದು ಬಾಲಕಿಯನ್ನು ರಕ್ಷಿಸಲಾಯಿತು.
ರಕ್ಷಿಸಲಾದ ಬಾಲಕಿಯನ್ನು ಹೆಚ್ಚಿನ ಆರೈಕೆ ಹಾಗೂ ಕೌನ್ಸೆಲಿಂಗ್‌ಗಾಗಿ ದೊಡ್ಡಬಳ್ಳಾಪುರದ ಸಖಿ ಕೇಂದ್ರಕ್ಕೆ ಕಳುಹಿಸಲಾಗಿದೆ.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾಲಕ್ಷ್ಮಿ ಹಾಗೂ ಶ್ರಿಧರ್, ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…