ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯವಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸದೆ, ಉತ್ತಮ ಶಿಕ್ಷಣ ಪಡೆಯಲು ಕಳುಹಿಸಬೇಕು ಎಂದು ದೇವನಹಳ್ಳಿಯ ಗೌರವಾನ್ವಿತ 5 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಲಕ್ಷ್ಮಣ ರಾಮು ಕುರಣಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಸಮಿತಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಇಲಾಖೆ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ದೇವನಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2025” ರ ಪ್ರಯುಕ್ತ ‘ಕಾನೂನು ಅರಿವು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದಲ್ಲಿ ಮಕ್ಕಳಿಗಾಗಿ ಇರುವ ಕಾಯ್ದೆಗಳು, ಹಕ್ಕುಗಳ ಕುರಿತು ಮಾಹಿತಿ ನೀಡಿದರು. ಮಕ್ಕಳು ಶಿಕ್ಷಣ ಪಡೆಯುವಾಗ ಅಲಕ್ಷ್ಯ ಮಾಡದೇ, ಶ್ರದ್ಧೆಯಿಂದ ಕಲಿತರ ಮಾತ್ರವೇ ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಿದೆ, ಇದಲ್ಲದೆ ಮಕ್ಕಳನ್ನು ಅಪಹರಣ ಮಾಡಿ ಭಿಕ್ಷಾಟನೆಗೆ ಅಥವಾ ಇತರೆ ಚಟುವಟಿಕೆಗಳಾದ ಅಂಗಡಿಗಳಲ್ಲಿ ಕೆಲಸಕ್ಕೆ ಬಳಸಿಕೊಳ್ಳುವುದು, ಇಂತಹ ಘಟನೆಗಳನ್ನು ಸಾರ್ವಜನಿಕರು ಗಮನಿಸಿದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕರೆ ಮಾಡಿ ಮಾಹಿತಿ ನೀಡಿ ಅಥವಾ ಸ್ಥಳೀಯ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ತಿಳಿಸಿದರು.
ಈ ವೇಳೆ ದೇವನಹಳ್ಳಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ನಾಯಕ್ ಅವರು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.
*ರಸ ಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ*
ಕಾರ್ಯಕ್ರಮದ ವೇದಿಕೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ರಸ ಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಪ್ರಥಮ ಬಹುಮಾನ ಸಿಂಚನ ಮತ್ತು ಮೌಲ ಶ್ರೀ ಶಾರದಾ ಪ್ರೌಢಶಾಲೆ ದೊಡ್ಡಬಳ್ಳಾಪುರ,
ದ್ವಿತೀಯ ಬಹುಮಾನ ಹಿಂಜಾಮುಲ್ ಮತ್ತು ಜಗದೀಶ್ ಸರ್ಕಾರಿ ಜೂನಿಯರ್ ಶಾಲೆ ದೇವನಹಳ್ಳಿ ,
ತೃತೀಯ ಬಹುಮಾನ ಸಂತೋಷ್ ಮತ್ತು ರುದ್ರೇಶ್ ಶ್ರೀನಿವಾಸ ಪ್ರೌಢಶಾಲೆ ನೆಲಮಂಗಲ.
ಕಾರ್ಯಕ್ರಮದಲ್ಲಿ ದೇವನಹಳ್ಳಿ ತಾಲ್ಲೂಕಿನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಪ್ರವೀಣ್ ನಾಯಕ್, ದೇವನಹಳ್ಳಿ ತಾಲ್ಲೂಕಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ವೆಂಕಟೇಶ್ ಎನ್, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಎಸ್.ಎಲ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ರಮೇಶ್ ಬಿ.ಆರ್, ದೇವನಹಳ್ಳಿ ತಾಲ್ಲೂಕಿನ ತಹಶೀಲ್ದಾರ್ ಹೆಚ್.ಸಿ ಬಾಲಕೃಷ್ಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ, ದೇವನಹಳ್ಳಿ ತಾಲ್ಲೂಕಿನ ವಕೀಲರ ಸಂಘದ ಅಧ್ಯಕ್ಷರು ಎಂ.ಆರ್ ಮುನಿರಾಜು, ಜೊತೆಗೆ ಜಿಲ್ಲೆಯ ನಾಲ್ಕು ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಸಿಬ್ಬಂದಿಗಳು ಹಾಗೂ ವಿವಿಧ ಪ್ರೌಢಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…