ಬಾವಿಯಲ್ಲಿ ಈಜಲು ಹೋದ ಯುವಕ ನೀರು ಪಾಲು: ತಾಲೂಕಿನ ಬನವತಿ ಗ್ರಾಮದಲ್ಲಿ ಘಟನೆ: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಸ್ನೇಹಿತರ ಜೊತೆ ಬಾವಿಯಲ್ಲಿ ಈಜಾಡಲು‌ ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ತಾಲೂಕಿನ ಸಾಸಲು‌ ಹೋಬಳಿಯ ಬನಾವತಿ ಗ್ರಾಮದಲ್ಲಿ ನಡೆದಿದೆ.

ಮಧ್ಯಾಹ್ನದ ಬೇಸಿಗೆ ಬೇಗೆ ತಣಿಸಿಕೊಳ್ಳಲು ಬಾವಿಗೆ ಈಜಲು ಹೋದ ಯುವಕ, ನೀರಲ್ಲಿ ಮುಳುಗಿ ಅಸುನೀಗಿದ್ದಾನೆ. ಆರೂಡಿ ಗ್ರಾಮದ ನರಸಿಂಹರಾಜ್(22), ಮೃತ ಯುವಕ.

ಸಂಜೆ ಯುವಕ ನೀರಿನಲ್ಲಿ‌ ಮುಳುಗಿ ಸಾವನಪ್ಪಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಹೊಸಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಮೃತ ದೇಹ ಹೊರತೆಗೆದಿದ್ದಾರೆ.

ಒಂದು ವರ್ಷದ ಹಿಂದೆ ಅಪಘಾತದಲ್ಲಿ ನರಸಿಂಹರಾಜ್ ಸಹೋದರ ಕಾರ್ತಿಕ್ ಸಾವನ್ನಪ್ಪಿದ್ದರು, ಇಬ್ಬರು ಪುತ್ರರನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ ತಂದೆ ನರಸಿಂಹಮೂರ್ತಿ, ತಾಯಿ ಮಂಜಮ್ಮ.

ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

1 hour ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

14 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

14 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

15 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

21 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

23 hours ago