ಬಾಶೆಟ್ಟಿಹಳ್ಳಿಯ ಭಾರತ್ ಪೆಟ್ರೋಲ್ ಬಂಕ್ ಹಿಂಭಾಗದ ಪುಟಾಣಿ ಕಾಂಪ್ಲೆಕ್ಸ್ ಬಳಿ ಮೂಟೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.
ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಡಿವೈಎಸ್ ಪಿ ರವಿ.ಪಿ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..
ಸುಮಾರು ಹತ್ತು ದಿನಗಳ ಹಿಂದೆಯೇ ಕೊಲೆ ಮಾಡಿ ಗೋಣಿ ಚೀಲದಲ್ಲಿ ಬಿಗಿಯಾಗಿ ಮೂಟೆಕಟ್ಟಿ ಬಿಸಾಡಿ ಹೋಗಲಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…