ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಹಾಗೂ ನಗರಸಭೆಯು ಚುನಾವಣೆಗೆ ಪೂರಕ ವ್ಯವಸ್ಥೆಯನ್ನು ಕಲ್ಪಿಸಿದ ಪರಿಣಾಮ ಚುನಾವಣೆ ಯಾವುದೇ ಸಮಸ್ಯೆಯಿಲ್ಲಿದೆ ಪೂರ್ಣಗೊಂಡಿದೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದ್ದು, ಮತದಾನ ಪೂರ್ಣಗೊಂಡಿದೆ. ಚುನಾವಣೆಯಲ್ಲಿ ಮತದಾರರು ಅತ್ಯಂತ ಹೆಚ್ಚು ಉತ್ಸುಕರಾಗಿ ಭಾಗವಹಿಸಿದ್ದಾರೆ. ಪಟ್ಟಣ ಪಂಚಾಯಿತಿಯಲ್ಲಿ ಶೇ.78.45ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಬೆಳಿಗ್ಗೆ ನಿಧಾನವಾಗಿ ನಡೆದ ಮತದಾನ ನಂತರ ಮತದಾನ ಚುರುಕುಗೊಂಡಿದೆ. ಭಾನುವಾರ 12 ಗಂಟೆ ಬಳಿಕ ಮತದಾನ ವೇಗ ಪಡೆದುಕೊಂಡಿದ್ದು, ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡಿದ್ದಾರೆ.

ನಕಲಿ ಮತದಾನಕ್ಕೆ ಯತ್ನ, ಪೊಲೀಸ್ ವಶಕ್ಕೆ

ಬಾಶೆಟ್ಟಿಹಳ್ಳಿ ಪಪಂ ವಾರ್ಡ್ ನಂ.17ರಲ್ಲಿ ವ್ಯಕ್ತಿಯೋರ್ವ ನಕಲಿ ಮತದಾನಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬೂತ್ ಏಜೆಂಟರು ವ್ಯಕ್ತಿಯ ಗುರುತು ರುಜುಪಡಿಸಿದ ಕಾರಣ ವ್ಯಕ್ತಿಯನ್ನು ಮತದಾನ ಕೇಂದ್ರದಿಂದ ಹೊರ ಕಳುಹಿಸಿ, ಪೊಲೀಸ್ ವಶಕ್ಕೆ ನೀಡಲಾಯಿತು.

ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ಪಟ್ಟಣ ಪಂಚಾಯತಿ ಚುನಾವಣೆಯ ನಾಗದೇನಹಳ್ಳಿ ಮತಗಟ್ಟೆಯಲ್ಲಿ ನೇಮಿಸಿದ್ದ ಶಿಕ್ಷಕನೋರ್ವ ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಮದ್ಯದ ಅಮಲಿನಲ್ಲಿ ಬಂದಿದ್ದ ಶಿಕ್ಷಕನನ್ನ ಪೊಲೀಸರ ವಶಕ್ಕೆ ಚುನಾವಣಾಧಿಕಾರಿಗಳು ನೀಡಿದ್ದಾರೆ.

ಭಾನುವಾರ ಬೆಳಗ್ಗೆ 7 ಗಂಟೆಯಿಂದಲೇ ಚುನಾವಣಾ ಮತದಾನ ಪ್ರಕ್ರಿಯೆಯಲ್ಲಿ ಕಾರ್ಯಪ್ರವೃತ್ತರಾಗಿದ್ದ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಲ್ಲಾ ಮತಗಟ್ಟೆಗಳಲ್ಲಿನ ವ್ಯವಸ್ಥೆಗಳನ್ನ ಪರಿಶೀಲನೆ ನಡೆಸಿದರು.

ಮತಗಟ್ಟೆ ಬಳಿ ಹಾಕಲಾಗಿದ್ದ ಶಾಮಿಯಾನ, ಪೆಂಡಾಲ್‌ಗಳನ್ನು ಕಡ್ಡಾಯವಾಗಿ ತೆರವುಗೊಳಿಸಿ ಚುನಾವಣೆಯ ನೀತಿ ಸಂಹಿತೆಗಳನ್ನ ಪಾಲಿಸುವಂತೆ ರಾಜಕೀಯ ಪಕ್ಷಗಳಿಗೆ ಸೂಚಿಸಿದರು. ಜತೆಗೆ ಪಪಂ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ನಿರ್ದಿಷ್ಟ ಸೂಚನೆ ನೀಡಿದ್ದಾರೆ. ಜತೆಗೆ ಎಸಿ ದುರ್ಗಾಶ್ರೀ, ತಹಶೀಲ್ದಾರ್ ಮಲ್ಲಪ್ಪ ಅವರು ಕೂಡ ವಿವಿಧ ಕಡೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

ಡಿ.24ಕ್ಕೆ ಮತ ಎಣಿಕೆ

ಭಾನುವಾರ ನಡೆದ ಬಾಶೆಟ್ಟಿಹಳ್ಳಿ ಚುನಾವಣೆಯ ಮತದಾನದ ಮತಗಳನ್ನು ನಗರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಮತಪೆಟ್ಟಿಗೆಗಳು ಭದ್ರವಾಗಿ ಇಡಲಾಗಿದ್ದು, ಭದ್ರತೆಗೆ ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಡಿ.24 ಬುಧವಾರದಂದು ಕೊಂಗಾಡಿಯಪ್ಪ ಕಾಲೇಜಿನಲ್ಲಿಯೇ ಮತ ಎಣಿಕೆ ನಡೆಯಲಿದೆ.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

6 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

7 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

10 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

15 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

18 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago