ತಾಲೂಕಿನ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಯಾಣಿಕರಿಗೆ ತಂಗುದಾಣ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಯುವ ಶಕ್ತಿ ಕರ್ನಾಟಕ ಸದಸ್ಯರು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಬಾಶೆಟ್ಟಿಹಳ್ಳಿ ಮೂಲಕ ಬೆಂಗಳೂರು- ಹಿಂದೂಪುರ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದ್ದು, ಬೆಂಗಳೂರು, ಹಿಂದೂಪುರ, ದೊಡ್ಡಬಳ್ಳಾಪುರ ನಗರ, ಗೌರಿಬಿದನೂರು ಸೇರಿದಂತೆ ವಿವಿಧ ಕಡೆ ತೆರಳಲು ಸಾಕಷ್ಟು ಪ್ರಯಾಣಿಕರು ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ಯಾವುದೇ ಸುಸಜ್ಜಿತ ತಂಗುದಾಣ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಆದ್ದರಿಂದ ಪ್ರಯಾಣಿಕರಿಗಾಗಿ ಸೂಕ್ತ ತಂಗುದಾಣದ ವ್ಯವಸ್ಥೆ ಮಾಡಬೇಕೆಂದು ಯುವ ಶಕ್ತಿ ಕರ್ನಾಟಕ ಸದಸ್ಯರು ಒತ್ತಾಯಿಸಿದ್ದಾರೆ.
ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹೆದ್ದಾರಿಯಲ್ಲಿಯೇ ಸರ್ಕಾರಿ ಹಾಗೂ ಖಾಸಗಿ ಬಸ್ಸಿಗಾಗಿ ಕಾಯುವ ದುಸ್ಥಿತಿ ನಿರ್ಮಾಣವಾಗಿದೆ. ದೂರದ ಊರುಗಳಿಗೆ ಪ್ರಯಾಣಿಸುವವರು ಸರ್ಕಾರಿ ಬಸ್ಸು ಮತ್ತು ಖಾಸಗಿ ವಾಹನಕ್ಕಾಗಿ ಉರಿಬಿಸಿಲು, ಸುರಿವ ಮಳೆಯಲ್ಲಿ ಹೆದ್ದಾರಿಯ ಬದಿಯಲ್ಲಿ ನಿಲ್ಲುತ್ತಿದ್ದಾರೆ. ಇದರಿಂದಾಗಿ ಹೆದ್ದಾರಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಅಧಿಕವಾಗಿದೆ. ತಂಗುದಾಣ ಇಲ್ಲದ ಕಾರಣ ಕೆಲ ಬಸ್ ಗಳು ಎಲ್ಲೆಂದರಲ್ಲಿ ನಿಲ್ಲಿಸುತ್ತವೆ, ಕೆಲವೊಮ್ಮೆ ನಿಲುಗಡೆ ಮಾಡದೆ ಹೊರಟು ಹೋಗುತ್ತವೆ. ಇದೊಂದು ಸಾರ್ವಜನಿಕ ಸಮಸ್ಯೆಯೆಂದು ಪರಿಗಣಿಸಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶೀಘ್ರವಾಗಿ ವ್ಯವಸ್ಥಿತವಾದ ಬಸ್ ತಂಗುದಾಣದ ವ್ಯವಸ್ಥೆಯನ್ನ ಕಲ್ಪಿಸಿಕೊಡಬೇಕಾಗಿ ಆಗ್ರಹಿಸಿದರು.
ಈ ವೇಳೆ ಶಿವಕುಮಾರ್, ಅಮರ್, ಪುನೀತ್, ಸರಸ್ವತಿ, ಮೇಘನಾ, ಅಭಿ, ಮಹೇಶ್ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…