ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಚಾಲಕ, ಮಣ್ಣು ಸಮೇತ ಸುಮಾರು 7 ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ನಡೆಸಲಾಗುತ್ತಿರುವ ಸಾಲು ಸಾಲು ಗ್ರಾಮ ಸಭೆಗಳ ಪರಿಣಾಮ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದೆ.. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಪೊಲೀಸರು‌ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪರವಾನಗಿ ಇಲ್ಲದೇ ಮಣ್ಣು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ…

ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Leave a Reply

Your email address will not be published. Required fields are marked *

error: Content is protected !!