ಪರಿಸರ ದಿನಾಚರಣೆಯ ಅಂಗವಾಗಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್ ವತಿಯಿಂದ ಬಾಶೆಟ್ಟಿಹಳ್ಳಿ ಕೆರೆ ಅಂಗಳದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿತ್ತು.
ಶಾಸಕ ಧೀರಜ್ ಮುನಿರಾಜ್ ಅವರು ಶಾಲಾ ಮಕ್ಕಳೊಂದಿಗೆ ಗಿಡ ನೆಟ್ಟು ನೀರೆರೆದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ವಿವಿಧ ರೀತಿಯ ವೇಷ ಧರಿಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವನ್ನು ನೀಡಿದ ರೀತಿ ಶ್ಲಾಘನೀಯ.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಶಿಕ್ಷಕ ವೃಂದದವರು, ಪ್ರಮುಖರು, ಪೌರ ಕಾರ್ಮಿಕರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.