ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ ಒಂದು ವಾರದಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದರೂ, ಈವರೆಗೆ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಹಗರಣದಲ್ಲಿ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಸ್ಥಳೀಯ ಮುಖಂಡ ಹಾಗೂ ಟಿಎಪಿಎಂಸಿಎಸ್ ನಿರ್ದೇಶಕ ಅಂಬರೀಶ್ ಆಗ್ರಹಿಸಿದರು.

ಗುರುವಾರ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವು ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಡೆದಿದ್ದರೂ, ಅನೇಕ ಕಾಮಗಾರಿಗಳು ನೆಲಮಟ್ಟದಲ್ಲಿ ನಡೆದಿಲ್ಲ. ಆದರೆ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಗುತ್ತಿಗೆದಾರರಿಗೆ ಕೋಟ್ಯಂತರ ರೂಪಾಯಿ ಪಾವತಿಸಲಾಗಿದೆ ಎಂದು ಆರೋಪಿಸಿದರು.

ಮೂರು ವರ್ಷಗಳಿಂದ ಪಟ್ಟಣ ಪಂಚಾಯಿತಿಗೆ ಚುನಾಯಿತ ಆಡಳಿತ ಮಂಡಳಿ ಇಲ್ಲದೆ ತಹಶೀಲ್ದಾರ್ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಅವಧಿಯಲ್ಲಿ ಅಧಿಕಾರಿಗಳೇ ಸಂಪೂರ್ಣ ಆಡಳಿತ ನಡೆಸಿದ್ದು, ಶಾಸಕರ ಸೂಚನೆಯಂತೆ ಆಡಳಿತ ನಡೆದಿರುವ ಕಾರಣ ಹಗರಣದಲ್ಲಿ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಮಾಹಿತಿ ಹಕ್ಕು ಕಾಯ್ದೆಯಡಿ ಸಂಗ್ರಹಿಸಿದ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರಿಗೆ ಸಲ್ಲಿಸಲಾಗಿದೆ. ದಾಖಲೆಗಳಲ್ಲಿ ಕಾಮಗಾರಿಗಳು ನಡೆದಿರುವಂತೆ ಬಿಲ್ ಮಾಡಲಾಗಿದ್ದರೂ, ವಾಸ್ತವದಲ್ಲಿ ಅನೇಕ ಕಾಮಗಾರಿಗಳು ನಡೆದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಹಣ ಸಿಗುತ್ತಿಲ್ಲ ಎಂದು ಶಾಸಕರು ಹೇಳುತ್ತಿರುತ್ತಾರೆ. ಆದರೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ವಾರ್ಷಿಕ ₹5 ಕೋಟಿಗೂ ಅಧಿಕ ತೆರಿಗೆ ಸಂಗ್ರಹವಾಗುತ್ತಿದ್ದು, ಅದೇ ಹಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದಿತ್ತು. ಆದರೆ ಆ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿದರು.

ಮೂರು ವರ್ಷಗಳಿಂದ ಮುಖ್ಯಾಧಿಕಾರಿಯಾಗಿದ್ದ ನರಸಿಂಹಮೂರ್ತಿ ಹಗರಣದ ವಿಚಾರ ಬಹಿರಂಗವಾಗುತ್ತಿದ್ದಂತೆ ದಿಢೀರ್ ವರ್ಗಾವಣೆ ಮಾಡಿಸಿಕೊಂಡು ತೆರಳಿದ್ದಾರೆ. ಅವರ ಅವಧಿಯಲ್ಲಿ ನಡೆದ ಬಹುತೇಕ ಕಾಮಗಾರಿಗಳ ಬಿಲ್‌ಗಳು ನಕಲಿಯಾಗಿವೆ ಎಂದು ಆರೋಪಿಸಿ, ಅವರ ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ದೂರು ನೀಡಲಾಗಿದೆ ಎಂದರು.

ಲೋಕಾಯುಕ್ತ ಅಧಿಕಾರಿಗಳು ಕಳೆದ ಹತ್ತು ದಿನಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ನಕಲಿ ಬಿಲ್‌ಗಳ ಪ್ರಮಾಣ ಕಂಡು ಅಧಿಕಾರಿಗಳೇ ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸ್ಥಳೀಯ ಮುಖಂಡರಾದ ನಾರಾಯಣಸ್ವಾಮಿ, ರವಿಕುಮಾರ್, ವಿಶ್ವನಾಥ್, ಸೋನು, ಸಿದ್ದರಾಜ್, ಮಹೇಶ್, ಪವನ್ ಕುಮಾರ್, ನಾಗೇಶ್ ಹಾಗೂ ಮಿಥುನ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

10 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

13 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

15 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

18 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

19 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago