ಗ್ರಾಮ ಪಂಚಾಯತಿಯಾಗಿದ್ದ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಜನಸಂಖ್ಯೆ ಹಾಗೂ ಸರಕಾರದ ವಿವಿಧ ಮಾನದಂಡಗಳಡಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿತು. ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಬಡ್ತಿ ಪಡೆದ ಬಾಶೆಟ್ಟಿಹಳ್ಳಿಯ ಅಭಿವೃದ್ಧಿಯು ಮತ್ತಷ್ಟು ವೇಗದ ಪಡೆದುಕೊಳ್ಳುವ ನಿರೀಕ್ಷೆಯಲ್ಲಿ ಜನತೆಗೆ ತೀವ್ರ ನಿರಾಸೆಯಾಗಿದೆ. ಕಳೆದ ಎರಡು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಮರಿಚಿಕೆಯಾಗಿದೆ. ಮೂಲಭೂತ ಸೌಕರ್ಯಗಳ ಅನುಷ್ಠಾನದಲ್ಲೂ ಹಿಂದೆ ಬಿದ್ದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕಸ ವಿಲೇವಾರಿ ಮತ್ತು ಸ್ವಚ್ಚತಾ ವಿಷಯಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಎರಡು ಬಾರಿ, ಕೇಂದ್ರ ಸರಕಾರದಿಂದ ಕೊಡಮಾಡಲಾಗುವ
ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತಿಕರಣ್, ನೈರ್ಮಲ್ಯ ರತ್ನ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದ್ದ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯೂ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಕಾರ್ಯವೈಖರಿಯಲ್ಲಿ ಸಂಪೂರ್ಣ ನೆಲಕಚ್ಚಿದೆ. ಮನೆ ಮನೆಯಲ್ಲಿ ಕಸ ವಿಂಗಡಣೆಯ ಕೆಲಸ ನಿಂತಿದೆ. ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಸ್ವಚ್ಚತಾ ವಾಹನಗಳು ತೆರಳುವುದೇ ಕಷ್ಟಕರವಾಗಿದೆ. ಇದರಿಂದಾಗಿ ಕಸದ ಸಮಸ್ಯೆ ಉಲ್ಬಣವಾಗಿದೆ.
ವೈಜ್ಞಾನಿಕವಾಗಿ ಕಸ ಸಂಗ್ರಹ ಮಾಡದ ಪಟ್ಟಣ ಪಂಚಾಯತಿಯ ವೈಫಲ್ಯದಿಂದಾಗಿ ವರದನಹಳ್ಳಿ ಬಳಿ ಅನಧಿಕೃತವಾಗಿ ಮಿನಿ ಎಂಎಸ್ಜಿಪಿ ಘಟಕ ಸೃಷ್ಟಿಯಾಗಿದೆ. ಹಸಿ ಕಸ, ಒಣಕಸ, ಪ್ಲಾಸ್ಟಿಕ್, ಘನತ್ಯಾಜ್ಯ ಹೀಗೆ ಯಾವುದೇ ರೀತಿಯಲ್ಲಿ ವಿಂಗಡಣೆ ಮಾಡದೆ ಕಸ ಸಂಗ್ರಹ ಮಾಡಿ ವರದನಹಳ್ಳಿ ಬಳಿಯ ಕಲ್ಲು ಬಂಡೆ ಹಳ್ಳದ ಬಳಿ ಸುರಿದು ರಾಶಿ ರಾಶಿ ಕಸಕ್ಕೆ ಬೆಂಕಿ ಇಡಲಾಗ್ತಿದೆ.
ಅವೈಜ್ಞಾನಿಕವಾಗಿ ಸುರಿದಿರುವ ರಾಶಿ ರಾಶಿ ಕಸಕ್ಕೆ ಪ್ರತಿನಿತ್ಯ ಬೆಂಕಿ ಇಡಲಾಗುತ್ತಿದೆ. ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿನ ವಿಷಯುಕ್ತ ಗಾಳಿ ಸೇವಿಸುವಂತಾಗಿದೆ. ದನಕರು ಹಾಗೂ ಕುರಿ ಮೇಕೆಗಳಿಗೆ ವಿಷಯುಕ್ತ ನೀರನ್ನು ಕುಡಿಯಬೇಕಾಗಿದೆ.
2019 ನೇ ಸಾಲಿನಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಂತ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕವನ್ನು ಸ್ಥಾಪನೆ ಮಾಡಲಾಯಿತು. ಈ ಘಟಕಕ್ಕೆ ಅಕ್ಕಪಕ್ಕದ ರಾಜ್ಯಗಳಿಂದ, ವಿವಿಧ ಜಿಲ್ಲೆಗಳಿಂದ ಹಾಗೂ ದೇಶ, ವಿದೇಶಗಳಿಂದ ಜನಪ್ರತಿನಿಧಿಗಳ ತಂಡ ಆಗಮಿಸಿ ಇಲ್ಲಿನ ಕಸ ಘಟಕ, ವಿಲೇವಾರಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಆದರೀಗ ತ್ಯಾಜ್ಯ ವಿಲೇವಾರಿ ಘಟಕ ಬಹುತೇಕ ನಿಷ್ಕ್ರಿಯವಾಗಿದ್ದು, ಕೇವಲ ಮ್ಯೂಸಿಯಂನಂತೆ ನೋಡಲಷ್ಟೆ ಚೆಂದವಾಗಿದೆ.
ಕಸದ ಅವ್ಯವಸ್ಥೆ ಬಗ್ಗೆ, ಅಭಿವೃದ್ಧಿ ಕೆಲಸಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಯಾವುದೇ ಪ್ರಯೋಜನವಾಗಿಲ್ಲ. ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿ ನೇಮಕವಾಗಬೇಕು. ಆದರೆ ಈ ಪ.ಪಂಚಾಯತಿಗೆ ಕಂದಾಯ ನಿರೀಕ್ಷಕ ಅಧಿಕಾರಿ ಬಡ್ತಿ ಆಧಾರದ ಮೇಲೆ ಈ ಕುರ್ಚಿಯಲ್ಲಿ ಕುಳಿತಿದ್ದಾರೆ. ಅಭಿವೃದ್ಧಿ ಮಾಡುವ ಬಗ್ಗೆ ಯಾವುದೇ ಮಾಹಿತಿಯೇ ಇಲ್ಲ. ತಮಗಿಷ್ಟ ಬಂದಂತೆ ತೆರಿಗೆ ವಸೂಲಿ ಮಾಡಿಕೊಂಡು ಅಂಧಾ ದರ್ಬಾರ್ ನಡೆಸುತ್ತಿದ್ದಾರೆ. ಇಂತ ಅಧಿಕಾರಿಯನ್ನು ವರ್ಗಾವಣೆ ಮಾಡಿ ಅರ್ಹ ಕೆಎಎಸ್ ಅಧಿಕಾರಿಯನ್ನು ನೇಮಿಸಿ ಅಭಿವೃದ್ಧಿಗೆ ಸಹಕಾರ ನೀಡಬೇಕು. ಇಲ್ಲವಾದಲ್ಲಿ ಪಂಚಾಯತಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಮಾಡಲಾಗುವುದು ಎಂದು ಮಾಜಿ ಸದಸ್ಯ ಅಂಬರೀಶ್ ತಿಳಿಸಿದರು.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…