ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಡಿ.21 ರಂದು ನಡೆಯಲಿದ್ದು, ಇಂದು 19ವಾರ್ಡ್ ಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ನಾಮ ಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ 19 ವಾರ್ಡುಗಳಿವೆ. 1ರಿಂದ 10ನೇ ವಾರ್ಡ್‌ವರೆಗೆ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಮಪತ್ರ ಸಲ್ಲಿಸಲು ಹಾಗೂ 11ರಿಂದ 19ನೇ ವಾರ್ಡ್‌ವರೆಗೆ ಅಂಬೇಡ್ಕರ್ ಭವನದಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿತ್ತು.
ಇಂದು (ಡಿ.9) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿತ್ತು. ಡಿ.10 ನಾಮಪತ್ರಗಳನ್ನು ಪರಿಶೀಲನೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ.
ಇಂದು (ಡಿ.9) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ಎಲ್ಲಾ ಪಕ್ಷ ಹಾಗೂ ಪಕ್ಷೇತರರು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.. 3ನೇ ವಾರ್ಡ್ ಓಬದೇನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮನು ಆರ್ ವಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಿ ಮಾಧ್ಯಮದವರೊಂದಿಗೆ ಅರ್ ವಿ ಮನು ಮಾತನಾಡಿ, ಕಾರ್ಮಿಕರು, ರೈತರು, ಮಹಿಳೆಯರು, ಯುವಕರ ಪರವಾಗಿ ಹಗಲಿರುಳು ಕೆಲಸ ಮಾಡುತ್ತೇವೆ. ಓಬದೇನಹಳ್ಳಿ ವಾರ್ಡ್ ನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ನನಗೆ ಮತ ಚಲಾಯಿಸುವ ಮೂಲಕ ಅವಕಾಶ ಮಾಡಿಕೊಡಬೇಕು ಎಂದರು.
ಓಬದೇನಹಳ್ಳಿ ವಾರ್ಡ್ ಗೆ ಮೂಲಭೂತ ಸೌಕರ್ಯಗಳು ಒದಗಿಸುವುದು, ಜನರಿಗೆ ಉದ್ಯೋಗ ಕಲ್ಪಿಸುವುದು, ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಸದ್ವಿನಿಯೋಗ ಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದರು….
ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಶಾಸಕ ಟಿ ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಟಿ.ರಾಮಕೃಷ್ಣಯ್ಯ(ರಾಮಣ್ಣ), ಹಿರಿಯ ಕಾಂಗ್ರೆಸ್ ಮುಖಂಡರು, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್ ವಿ ಮಹೇಶ್ ಕುಮಾರ್, ಆರ್ ವಿ ಶಿವಕುಮಾರ್, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…