ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಡಿ.19 ರಿಂದ 21ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯರ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಂಬಂಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ 2025 ನೇ ಡಿಸೆಂಬರ್ 19 ರ ಸಂಜೆ 05.00 ಗಂಟೆಯಿಂದ ಡಿಸೆಂಬರ್ 21 ರ ರಾತ್ರಿ 12.00 ಗಂಟೆಯವರೆಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದನ್ನು ನಿಷೇಧಿಸಿದೆ. ಸಾರ್ವಜನಿಕರು ಮತದಾನ ಮಾಡಲು ಅನುಕೂಲವಾಗುವಂತೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ದಿನಾಂಕ:21.12.2025 ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ. ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಹಾಗೂ ಸ್ಪೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ/ಮೆರವಣಿಗೆಗಳನ್ನು ಮತ್ತು ಶವಸಂಸ್ಕಾರಗಳನ್ನು ಚುನಾವಣಾ ನೀತಿ ಸಂಹಿತ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನಡೆಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

10 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

13 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

15 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

18 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

19 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago