Categories: ಲೇಖನ

ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ……..

ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ………

ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ…………

ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ………

ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ……….

ಆದರೆ,
ನಾನಾ ಕಾರಣಗಳಿಂದ ನಮ್ಮನ್ನು ದ್ವೇಷಿಸುವ, ಅಸೂಯೆ ಪಡುವ, ನಮ್ಮ ಕಾಲೆಳೆಯುವ, ನಮಗೆ ತೊಂದರೆ ಕೊಡುವ ಜನರ ನಡುವೆ ನಾವು ವಾಸಿಸುವುದು ಕಷ್ಟವಾದಾಗ ನಾವು ಸಾಧನೆಯ ಬೆಟ್ಟವನ್ನು ‌ಏರಲು ಪ್ರಯತ್ನಿಸಬೇಕು………..

ಇಲ್ಲದಿದ್ದರೆ ಈ ಜನರ ನಡುವೆ ನಮ್ಮ ಬದುಕು ಅಸಹನೆಯಿಂದಲೇ ಮುಗಿದು ಹೋಗುತ್ತದೆ…….

ಹಾಗಾದರೆ ಸಾಧನೆ ಎಂದರೇನು ?

ನಮ್ಮ ‌ಸಾಮಾನ್ಯ ಜನರ ಭಾವನೆಯಲ್ಲಿ ಹೆಚ್ಚು ಹೆಚ್ಚು ಹಣ ಮಾಡುವುದು, ಉನ್ನತ ಅಧಿಕಾರಕ್ಕೆ ಏರುವುದು, ಅಪಾರ ‌ಆಸ್ತಿ ಮಾಡುವುದು, ಪ್ರಶಸ್ತಿಗಳನ್ನು ಪಡೆಯುವುದು, ಜನಪ್ರಿಯತೆ ಗಳಿಸುವುದು,
ಒಟ್ಟಿನಲ್ಲಿ ನಮ್ಮ ಸಮಕಾಲೀನ ಇತರರಿಗಿಂತ ನೋಡುಗರ ದೃಷ್ಟಿಯಲ್ಲಿ ಹೆಚ್ಚು ಹೆಸರು ಮಾಡುವುದು ಎಂದಾಗಿದೆ.‌……

ಈ ರೀತಿಯ ಸಾಧನೆ ಮಾಡುವ ಅವಕಾಶವಿದ್ದು ಒಂದು ವೇಳೆ ನಾವು ಅದರಲ್ಲಿ ಯಶಸ್ವಿಯಾದರೆ, ನಾವು ಯಾವುದೇ ಸ್ಥಳದಲ್ಲಿ ಇದ್ದರೂ ಗೌರವ ಘನತೆಗೇನು ಕುಂದು ಬರುವುದಿಲ್ಲ……..

ಅನೇಕ ಕಾರಣಗಳಿಗಾಗಿ ನಾವು ಈ ರೀತಿಯ ಸ್ಥಾನ ಮಾನ ಪಡೆಯಲು ಸಾಧ್ಯವಾಗದಿದ್ದಾಗ, ನಮ್ಮ ನಡುವಿನ ಇತರರು ಈ ವ್ಯಾವಹಾರಿಕ ಜಗತ್ತಿನಲ್ಲಿ ನಮಗಿಂತ ಮುಂದೆ ಹೋಗಿ ನಮ್ಮನ್ನು ಕೀಳಾಗಿ ಕಂಡಾಗ ಅಥವಾ ನಮ್ಮ ಮನಸ್ಸು ಹಾಗೆ ಭಾವಿಸಿದಾಗ ನಾವು ಎತ್ತರದ ಪ್ರದೇಶಕ್ಕೆ ಹೋಗಲು ಪ್ರಯತ್ನಿಸಬೇಕು……

ಅದು ಹೇಗೆ ಸಾಧ್ಯ.?
ಈ ಯಾವುದೇ ಅನುಕೂಲಗಳು ನಮಗೆ ಇಲ್ಲದಿರುವಾಗ ಸಾಧನೆಯ ಮೆಟ್ಟಿಲು ಹತ್ತುವುದು ಹೇಗೆ ???????

ಖಂಡಿತ ‌ಸಾಧ್ಯವಿದೆ…..

ನಮ್ಮ ಇಡೀ ವ್ಯಕ್ತಿತ್ವವನ್ನು ಪುನರ್ ರೂಪಿಸಿಕೊಳ್ಳಬೇಕು ಮತ್ತು ಉನ್ನತೀಕರಿಸಿಕೊಳ್ಳಬೇಕು.
ಹೇಗೆಂದರೆ………..

ಹೆಚ್ಚು ನಿರೀಕ್ಷೆಗಳನ್ನೇ ಇಟ್ಟುಕೊಳ್ಳದೆ ನಿರ್ಲಿಪ್ತತೆ ಅಥವಾ ಸ್ಥಿತ ಪ್ರಜ್ಞತೆಯನ್ನು ಬೆಳೆಸಿಕೊಳ್ಳಬೇಕು…….

ಯಾವುದೇ ‌ಸಂದರ್ಭದಲ್ಲಿಯೂ ಯಾರ ಮೇಲೆಯೂ ಅವಲಂಬಿತವಾಗುವ ಅಥವಾ ಯಾವುದನ್ನಾದರೂ ಬೇಡುವ ಪರಿಸ್ಥಿತಿಯನ್ನು ತಿರಸ್ಕರಿಸಬೇಕು…..

ಈ ಪರಿಸ್ಥಿತಿಯಲ್ಲಿಯೂ ಅನಿರೀಕ್ಷಿತವಾಗಿ ಕೆಲವು ಆಕರ್ಷಣೆಗಳು ಮತ್ತು ಅನುಕೂಲಕರ ಲಾಭಗಳು ನಮಗೆ ಒಲಿಯಬಹುದು. ಅವುಗಳನ್ನು ನಮ್ಮ ಘನತೆಗೆ ತಕ್ಕುದಾದ ಮತ್ತು ಭವಿಷ್ಯದ ನಮ್ಮ ಸ್ವಾಭಿಮಾನದ ಬದುಕಿಗೆ ತೊಂದರೆಯಾಗದೆ ಇದ್ದರೆ ಮಾತ್ರ ಸ್ವೀಕರಿಸಬೇಕು. ಇಲ್ಲದಿದ್ದರೆ ‌ನಮ್ಮ ಮನೋಬಲ ಉಪಯೋಗಿಸಿ ತಿರಸ್ಕರಿಸಬೇಕು…..

ಈ ಹಂತದಲ್ಲಿ ಸಾಂಪ್ರದಾಯಿಕ ಶೈಲಿಯ ಜನರ ನಡುವೆ ಇರುವುದಕ್ಕಿಂತ ಏಕಾಂತದ ವಾತಾವರಣದಲ್ಲಿ ನಮ್ಮ ಸಮಯ ಕಳೆಯುವಂತೆ ನಮ್ಮ ಮನಸ್ಸಿನ ಅರಮನೆಗೆ ನಾವೇ ರಾಜರಾಗಬೇಕು…..

ಸಮಾಜದ ಸುತ್ತ ನಾವು ಸುತ್ತುವುದಕ್ಕಿಂತ ನಮ್ಮ ಸುತ್ತ ಸಮಾಜ ಸುತ್ತುವ ಸ್ವಯಂ ಅಹಂ ರೂಪಿಸಿಕೊಳ್ಳಬೇಕು. ನಮಗೆ ಆಸಕ್ತಿದಾಯಕ ಕ್ಷೇತ್ರವನ್ನು ಆರಿಸಿಕೊಂಡು ಅದರಲ್ಲಿ ತಪಸ್ಸಿನಂತೆ ನಿರಂತರವಾಗಿ ತೊಡಗಿಸಿಕೊಳ್ಳಬೇಕು. ಅದರಲ್ಲಿ ಸಾಧನೆ ಮಾಡುವ ಯಾವ ಅವಕಾಶವನ್ನೂ ಕಳೆದುಕೊಳ್ಳಬಾರದು…..

ಎಲ್ಲಕ್ಕಿಂತ ಮುಖ್ಯವಾಗಿ ಸಾವಿನ ಭಯವನ್ನು ಕಡಿಮೆ ಮಾಡಿಕೊಂಡು ಅದನ್ನು ಸ್ವೀಕರಿಸಲು ಮಾನಸಿಕವಾಗಿ ಸಿದ್ದರಾಗಬೇಕು. ಸಾವಿನ ನಂತರದ ಅಂಶಗಳ ಬಗ್ಗೆ ಯೋಚಿಸಲೇಬಾರದು….

ಇದು ಎಲ್ಲವನ್ನೂ ತ್ಯಜಿಸಿ ಸನ್ಯಾಸಿಯಾಗುವ ಸ್ಥಿತಿಯಲ್ಲ. ಸಾಧನೆಗಾಗಿ ರೂಪಿಸಿಕೊಳ್ಳುವ ಸರಳ ಮಾನಸಿಕ ಜೀವನಶೈಲಿ……

ಆಗ ನಮ್ಮನ್ನು ಹಿಡಿಯಲು ಅಥವಾ ನಿಯಂತ್ರಿಸಲು ಯಾರಿಗೂ ಸಾಧ್ಯವಾಗುವುದಿಲ್ಲ…..

ಏನೂ ಇಲ್ಲದ ಸಂದರ್ಭದಲ್ಲಿಯೂ ಇದನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ, ಕನಿಷ್ಠ ಮಟ್ಟದ ಸರಳ ಜೀವನಶೈಲಿ ನಮ್ಮದಾದರೆ ನಮ್ಮ ವ್ಯಕ್ತಿತ್ವ ತಾನೇತಾನಾಗಿ ಮೇಲಕ್ಕೇರುತ್ತದೆ. ನಮ್ಮ ಬಡತನದ, ಸೋಲಿನ, ಅಸಹಾಯಕತೆಯ ಜೀವನ ನೋಡಿ ಅಸೂಯೆ ಪಡುವ, ವ್ಯಂಗ್ಯ ಮಾಡುವ ಜನ, ತಮ್ಮ ವ್ಯಾವಹಾರಿಕ ಮತ್ತು ಸಂಬಂಧಗಳ ಏರಿಳಿತಗಳಿಂದ ಬಸವಳಿದಾಗ ನಮ್ಮ ನೆಮ್ಮದಿಯ ಜೀವನ ಅವರಿಗೆ ಸೋಜಿಗದಂತೆ ಕಾಣುತ್ತದೆ. ಅವರುಗಳು ನಮ್ಮ ವ್ಯಕ್ತಿತ್ವದ ಮುಂದೆ ಸಣ್ಣವರಾಗಿ ಕಾಣುತ್ತಾರೆ. ಅದೇ ನಮ್ಮ ಬಹುದೊಡ್ಡ ಆತ್ಮವಿಶ್ವಾಸ….

ಮಾನಸಿಕವಾಗಿ ನಾವು ಏರುವ ಎತ್ತರಕ್ಕೆ ಯಾವುದೇ ಮಿತಿಯೂ ಇಲ್ಲ……….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

7 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

8 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

16 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago