Categories: ಕೋಲಾರ

ಬಿಇಎಂಎಲ್ ಹೊರಗುತ್ತಿಗೆ ಕಾರ್ಮಿಕರ ಸಮಸ್ಯೆ ಬಗ್ಗೆ ರಕ್ಷಣಾ ಸಚಿವರ ಜತೆ ಚರ್ಚೆ- ನನ್ನ ಮಾತಿನ ಮೇಲೆ ವಿಶ್ವಾಸವಿಟ್ಟು ಕೆಲಸಕ್ಕೆ ಹಾಜರಾಗಲು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮನವಿ

ಕೋಲಾರ: ಬಿಇಎಂಎಲ್ ಹೊರಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ಜಿಲ್ಲೆಯ ಕೆಜಿಎಫ್ ನಲ್ಲಿ ಕಳೆದ 13 ದಿನಗಳಿಂದ ಕಾರ್ಮಿಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಕೋಲಾರ ಸಂಸದ ಮಲ್ಲೇಶ್ ಬಾಬು, ಶಾಸಕರಾದ ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿ ಮಾತನಾಡಿದ ಅವರು ನಿಮ್ಮ ಬೇಡಿಕೆಗಳ ಬಗ್ಗೆ ಈಗಾಗಲೇ ಕಂಪನಿಯ ಸಿಎಂಡಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ನಾನು ನಾಳೆ (ಸೋಮವಾರ) ಬೆಳಗ್ಗೆ ದೆಹಲಿಗೆ ತೆರಳುತ್ತಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ನಿಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತೇನೆ. ಸಿಂಗ್ ಅವರಿಗೆ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ ಇದ್ದು, ನಿಮ್ಮ ಸಮಸ್ಯೆಗಳಿಗೆ ಅವರು ಖಂಡಿತಾ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎನ್ನುವ ಭರವಸೆ ಇದೆ ಎಂದರು.

ಕಾರ್ಮಿಕರ ಉದ್ಯೋಗ ಖಾಯಂ, ವೇತನ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಕಳೆದ 13 ದಿನಗಳಿಂದ ಧರಣಿ ನಡೆಸುತ್ತಿರುವ ನಿಮ್ಮ ನೋವನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ನಾನು ಇಲ್ಲಿಗೆ ಬರುವುದಕ್ಕೆ ಮೊದಲೇ ಬಿಇಎಂಎಲ್ ಸಿಎಂಡಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ಉದ್ಯೋಗ ಖಾಯಂ ವಿಷಯ ಒಂದು ಮಾತ್ರ ನನ್ನ ಕೈಯ್ಯಲ್ಲಿ ಇಲ್ಲ, ಉಳಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ನಾವು ಪರಿಶೀಲನೆ ಮಾಡಲು ಸಿದ್ಧರಿದ್ದೇವೆ. ಕಾರ್ಮಿಕರು ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾದರೆ, ಈ ಬಗ್ಗೆ ಕೂತು ಚರ್ಚೆ ನಡೆಸಲು ನಾವು ತಯಾರಿದ್ದೇವೆ ಎಂದು ಅವರು ನನಗೆ ತಿಳಿಸಿದರು ಎಂಬುದಾಗಿ ಸಚಿವರು ಕಾರ್ಮಿಕರ ಸಭೆಯಲ್ಲಿ ಹೇಳಿದರು.

ಬಿಇಎಂಎಲ್ ಕೇಂದ್ರ ಸರಕಾರಿ ಸ್ವಾಮ್ಯದ ಬೃಹತ್ ಕೈಗಾರಿಕೆ. 13 ದಿನಗಳಿಂದ ಧರಣಿಗೆ ಅವಕಾಶ ಮಾಡಿಕೊಡುವ ಪರಿಸ್ಥಿತಿ ಸೃಷ್ಟಿ ಆಗಿದ್ದೇ ಕಳವಳಕಾರಿ. ಇದು ಕಂಪನಿಗಾಗಲಿ, ದೇಶಕ್ಕಾಗಲಿ ಅಥವಾ ಕಾರ್ಮಿಕರ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಆದ್ದರಿಂದ ನನ್ನ ಮಾತಿನ ಮೇಲೆ ಭರವಸೆ ಇಡಿ. ತಕ್ಷಣ ನಿಮ್ಮ ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾಗಿ. ನಾನು ಗುರುವಾರದೊಳಗೆ ರಕ್ಷಣಾ ಸಚಿವರ ಜತೆ ಚರ್ಚೆ ನಡೆಸಿದ ಬಳಿಕ ಶುಕ್ರವಾರ ಬೆಳಗ್ಗೆ ನಿಮ್ಮೆಲ್ಲರಿಗೂ ಒಳ್ಳೆಯ ಸುದ್ದಿ ಕೊಡುತ್ತೇನೆ ಎಂದರು.

ನಿಮ್ಮಗಳ ಕುಟುಂಬಗಳಿಗೆ ಒಳ್ಳೆಯದಾಗುವ ರೀತಿಯಲ್ಲಿ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ, ಇದು ನನ್ನ ಜವಾಬ್ದಾರಿ. ನೀವು ಮೊದಲು ಕೆಲಸಕ್ಕೆ ಹೋಗಿ, ಇಷ್ಟು ದಿನ ಧರಣೆ ಕೂತರೆ ಯಾರಿಗೂ ಶ್ರೇಯಸ್ಕರ ಅಲ್ಲ. ಶನಿವಾರ ಈ ವಿಷಯ ನನ್ನ ಗಮನಕ್ಕೆ ಬಂತು. ಭಾನುವಾರ ನಿಮ್ಮ ಬಳಿಗೆ ಬಂದಿದ್ದೇನೆ ಎಂದರು.

ಇದಕ್ಕೂ ಮೊದಲು ಸಚಿವ ಕುಮಾರಸ್ವಾಮಿ ಕಾರ್ಮಿಕ ಮುಖಂಡರ ಮನವಿಗಳನ್ನು ಆಲಿಸಿದರು. ಬಳಿಕ ಸಚಿವರ ಮಾತಿಗೆ ಸ್ಪಂದಿಸಿದ ಕಾರ್ಮಿಕರು; ಈ ಕೂಡಲೇ ನಾವು ಕೆಲಸಕ್ಕೆ ಹಾಜರಾಗಬೇಕು ಎನ್ನುವ ನಿಮ್ಮ ಒತ್ತಾಸೆಯ ಬಗ್ಗೆ ಚರ್ಚೆ ನಡೆಸುತ್ತೇವೆ. ಇಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ಕಳಕಳಿಗೆ ವಿರುದ್ಧವಾದ ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಸಂಸದ ಎಸ್. ಮುನಿಸ್ವಾಮಿ, ಎಂಎಲ್ಸಿ ಇಂಚರ ಗೋವಿಂದರಾಜು, ಮಾಜಿ ಸದಸ್ಯ ಚೌಡರೆಡ್ಡಿ, ಮಾಜಿ ಶಾಸಕರಾದ ವೈ.ಸಂಪಂಗಿ, ಎಂ.ನಾರಾಯಣಸ್ವಾಮಿ, ಬಿ.ಪಿ ವೆಂಕಟಮುನಿಯಪ್ಪ, ಸೇರಿದಂತೆ ಅನೇಕ ಮುಖಂಡರು, ವಿವಿಧ ಸಂಘಟನೆಗಳ ಕಾರ್ಮಿಕ ಮುಖಂಡರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

8 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

8 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

13 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago