ಬಿಎಂಟಿಸಿ ಬಸ್ ಡ್ರೈವರ್ ಗೆ ಹೃದಯಾಘಾತ: ಬಸ್ ಡ್ರೈವ್ ಮಾಡುತ್ತಲೇ ಡ್ರೈವರ್ ಸೀಟ್‌ನಿಂದ ಕುಸಿದು ಬಿದ್ದ ಚಾಲಕ: ಸಂಚರಿಸುತ್ತಿದ್ದ ಬಸ್​​ನ್ನು ನಿಲ್ಲಿಸಿ ಸಮಯಪ್ರಜ್ಞೆ ಮೆರೆದ ಕಂಡಕ್ಟರ್ ಓಬಳೇಶ್

ನೆಲಮಂಗಲದಿಂದ ಯಶವಂತಪುರ ಕಡೆ ಬರುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಡ್ರೈವರ್ ಕಿರಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಹಾಗೇ ನರಳಾಡಿದ ಕಿರಣ್ ತಕ್ಷಣವೇ ಡ್ರೈವರ್ ಸೀಟ್‌ನಿಂದ ಕುಸಿದು ಬೀಳುತ್ತಾ ಇದ್ದರು. ಇದನ್ನು ಗಮನಿಸಿದ ಕಂಡಕ್ಟರ್ ಓಬಳೇಶ್ ಸಂಚರಿಸುತ್ತಿದ್ದ ಬಸ್​​ನ್ನು ನಿಲ್ಲಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಸನ ಮೂಲದ ಚಾಲಕ ಕಿರಣ್‌ಕುಮಾರ್ (40) ಮೃತ ಚಾಲಕ. ಇಂದು (ನವೆಂಬರ್ 06) ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್ ಡ್ರೈವ್​ ಮಾಡಿಕೊಂಡು ಹೋಗುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿದೆ.

ಬಿಎಂಟಿಸಿ ಡ್ರೈವರ್ ಕಿರಣ್‌ ಅವರಿಗೆ ಹೃದಯಾಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡ್ರೈವಿಂಗ್ ವೇಳೆ ಚಾಲಕ ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ಪಿದ್ದಾರೆ. ಪ್ರಾಣ ಬಿಟ್ಟ ಡ್ರೈವರ್‌ಗೆ ಇನ್ನೂ 39 ವರ್ಷ ವಯಸ್ಸಾಗಿತ್ತು ಅಷ್ಟೇ. ಹೃದಯಾಘಾತದ ಸಂದರ್ಭದಲ್ಲೂ ಕಿರಣ್ ಅವರು ಬಸ್ ನಿಲ್ಲಿಸಲು ಪ್ರಯತ್ನ ಪಟ್ಟಿದ್ದಾರೆ. ಕಂಡಕ್ಟರ್ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.

ಬಿಎಂಟಿಸಿ ಕಂಡಕ್ಟರ್ ಓಬ್ಳೇಶ್ ಅವರ ಈ ಸಾಹಸ ಮತ್ತು ಸಮಯಪ್ರಜ್ಞೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. BMTC ಮುಖ್ಯ ಸಂಚಾರ ವ್ಯವಸ್ಥಾಪಕರಾದ ಜಿ.ಟಿ ಪ್ರಭಾಕರ್ ರೆಡ್ಡಿ ಅವರು ಪ್ರಯಾಣಿಕರ ಜೀವ ಉಳಿಸಿದ ಕಂಡಕ್ಟರ್‌ಗೆ ಬಹುಮಾನ ಘೋಷಣೆ ಮಾಡಿದ್ದಾರೆ..

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

9 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

11 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

13 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

18 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

21 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago