ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೋರ್ವನ ಹುಚ್ಚಾಟಕ್ಕೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಕಂಡಕ್ಟರ್ ಗೆ ಚಾಕುವಿನಿಂದ ಇರಿದು, ಸುತ್ತಿಗೆಯಿಂದ ಬಸ್ಸಿನ ಗಾಜು ಪುಡಿಗಟ್ಟಿ ದುಷ್ಕೃತ್ಯ ಮೆರೆದಿದ್ದಾನೆ.
ಈ ಘಟನೆ (ಅಕ್ಟೋಬರ್ 01) ಸಂಜೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ ನಡೆದಿದೆ.
ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ನಲ್ಲಿ ಈ ದುಷ್ಕೃತ್ಯ ನಡೆದಿದೆ.
ಕಂಡಕ್ಟರ್ ಯೋಗೇಶ್ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ. ಇದನ್ನು ನೋಡಿ ಸಹ ಪ್ರಯಾಣಿಕರು ಭಯದಿಂದ ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್ಫೀಲ್ಡ್ ಠಾಣೆ ಪೊಲೀಸರು ದೌಡಾಯಿಸಿ, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.
ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್ ಯೋಗೇಶ್ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎನ್ನಲಾಗಿದೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಜಾಬ್ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಇದು ಖಂಡಿತವಾಗಿಯೂ ಭಯಾನಕ ಕೃತ್ಯ. ಸಾರ್ವಜನಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಭವಿಷ್ಯದಲ್ಲಿ ಇಂತಹ ದುಷ್ಕೃತ್ಯ ಚಟುವಟಿಕೆಗಳನ್ನು ತಪ್ಪಿಸಲು ಅವರ ವಿರುದ್ಧ ಕಠಿಣ ಮತ್ತು ಮಾದರಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…