ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೋರ್ವನ ಹುಚ್ಚಾಟಕ್ಕೆ ಬೆಚ್ಚಿಬಿದ್ದ ಸಹ ಪ್ರಯಾಣಿಕರು: ಕಂಡಕ್ಟರ್ ಗೆ ಚಾಕುವಿನಿಂದ ಇರಿತ: ಸುತ್ತಿಗೆಯಿಂದ ಬಸ್ಸಿನ ಗಾಜು ಪುಡಿಗಟ್ಟಿ‌ ದುಷ್ಕೃತ್ಯ ಮೆರೆದ ಸೈಕೋ

ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೋರ್ವನ ಹುಚ್ಚಾಟಕ್ಕೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಕಂಡಕ್ಟರ್ ಗೆ ಚಾಕುವಿನಿಂದ ಇರಿದು, ಸುತ್ತಿಗೆಯಿಂದ ಬಸ್ಸಿನ ಗಾಜು ಪುಡಿಗಟ್ಟಿ‌ ದುಷ್ಕೃತ್ಯ ಮೆರೆದಿದ್ದಾನೆ.

ಈ ಘಟನೆ (ಅಕ್ಟೋಬರ್ 01) ಸಂಜೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ ನಡೆದಿದೆ.

ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ.‌ ಇದನ್ನು ನೋಡಿ ಸಹ ಪ್ರಯಾಣಿಕರು ಭಯದಿಂದ ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು ದೌಡಾಯಿಸಿ, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎನ್ನಲಾಗಿದೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಜಾಬ್ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಇದು ಖಂಡಿತವಾಗಿಯೂ ಭಯಾನಕ ಕೃತ್ಯ.  ಸಾರ್ವಜನಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಭವಿಷ್ಯದಲ್ಲಿ ಇಂತಹ ದುಷ್ಕೃತ್ಯ ಚಟುವಟಿಕೆಗಳನ್ನು ತಪ್ಪಿಸಲು ಅವರ ವಿರುದ್ಧ ಕಠಿಣ ಮತ್ತು ಮಾದರಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

21 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago