ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘ ಒತ್ತಾಯಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸ್ಕೀಮ್ ನೌಕರರ ಕರಾಳ ದಿನಾಚರಣೆ ಅಂಗವಾಗಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ನಳಿನಾಕ್ಷಿ, ಜಿಲ್ಲೆಯ 600ಕ್ಕೂ ಹೆಚ್ಚು ಅಂಗನವಾಡಿ ನೌಕರರನ್ನು ಬಿಎಲ್‌ಒ ಕೆಲಸಕ್ಕೆ ನಿಯೋಜಿಸಿರುವುದರಿಂದ ಅಂಗನವಾಡಿ ಸೇವೆಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.

ಅಂಗನವಾಡಿ ನೌಕರರಲ್ಲಿ ಹಲವರಿಗೆ ಆರೋಗ್ಯ ಸಮಸ್ಯೆಗಳಿದ್ದು, ಕೆಲವರಿಗೆ ಗರ್ಭಕೋಶ ಶಸ್ತ್ರಚಿಕಿತ್ಸೆ ನಡೆದಿದ್ದು, ಕೆಲವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಇನ್ನೂ ಕೆಲವರಿಗೆ ಕಾಲು ನೋವು ಹಾಗೂ ಮೊಬೈಲ್‌ನಲ್ಲಿ ಕೆಲಸ ಮಾಡಲು ಕಣ್ಣಿನ ಸಮಸ್ಯೆಗಳಿವೆ. ಇಂತಹ ಪರಿಸ್ಥಿತಿಯಲ್ಲಿ ಬಿಎಲ್‌ಒ ಜವಾಬ್ದಾರಿ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಹೇಳಿದರು.

ಅಂಗನವಾಡಿಗಳು ಈಗಾಗಲೇ ಆರಂಭವಾಗಿದ್ದು, ಮಕ್ಕಳು ಕೇಂದ್ರಗಳಿಗೆ ಬರುತ್ತಿದ್ದಾರೆ. ಈ ವೇಳೆ ನೌಕರರನ್ನು ಬಿಎಲ್‌ಒ ಕೆಲಸಕ್ಕೆ ನಿಯೋಜಿಸಿದರೆ ಮಕ್ಕಳ ಆರೈಕೆ ಮತ್ತು ಶಿಕ್ಷಣದ ಮೇಲೆ ಪರಿಣಾಮ ಬೀಳಲಿದೆ. ಮಕ್ಕಳಿಗೆ ಯಾವುದೇ ಸಮಸ್ಯೆಯಾದರೆ ಅದರ ಹೊಣೆ ಯಾರು ಎಂಬ ಪ್ರಶ್ನೆಯನ್ನು ಅವರು ಎತ್ತಿದರು.

ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಒತ್ತಾಯ

ರಾಷ್ಟ್ರೀಯ ಶಿಕ್ಷಣ ನೀತಿ–2020 ಜಾರಿಯಿಂದ 3 ರಿಂದ 6 ವರ್ಷದ ಮಕ್ಕಳನ್ನು ಅಂಗನವಾಡಿಗಳಿಂದ ದೂರವಿಟ್ಟು ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ–ಯುಕೆಜಿ ಆರಂಭಿಸಲಾಗುತ್ತಿದೆ. ಇದರಿಂದ ಅಂಗನವಾಡಿಗಳ ಫಲಾನುಭವಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ನಳಿನಾಕ್ಷಿ ತಿಳಿಸಿದರು.

ರಾಜ್ಯದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ–ಯುಕೆಜಿ ಆರಂಭಿಸುವುದಾಗಿ ಸರ್ಕಾರ ಘೋಷಿಸಿದ್ದರೂ, ಅದಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಲ್ಲ ಎಂದು ದೂರಿದರು. ಜೊತೆಗೆ, ಫಲಾನುಭವಿಗಳಿಗೆ ಸ್ಥಳೀಯ ತಾಜಾ ಆಹಾರದ ಬದಲಿಗೆ ಸಂಸ್ಕರಿಸಿದ ಪ್ಯಾಕೆಟ್ ಆಹಾರ, ನಗದು ವರ್ಗಾವಣೆ ಹಾಗೂ ಕೇಂದ್ರಿಕೃತ ಅಡಿಗೆ ವ್ಯವಸ್ಥೆಗಳ ಮೂಲಕ ಐಸಿಡಿಎಸ್ ಯೋಜನೆಯನ್ನು ಖಾಸಗೀಕರಣ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಕನಿಷ್ಠ ವೇತನ ಮತ್ತು ಮೂಲ ಸೌಲಭ್ಯಗಳ ಬೇಡಿಕೆ

ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ ₹41,000 ಹಾಗೂ ಸಹಾಯಕಿಯರಿಗೆ ₹35,000 ಕನಿಷ್ಠ ವೇತನ ನೀಡಬೇಕು ಎಂದು ಸಂಘ ಒತ್ತಾಯಿಸಿತು. ಜೊತೆಗೆ, ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರು, ಗ್ಯಾಸ್ ಸಂಪರ್ಕ, ಅಡುಗೆ ಸಲಕರಣೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳಿಗೆ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಬಾಡಿಗೆ ನೀಡಬೇಕೆಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎ. ವೆಂಕಟೇಶ್, ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಖಜಾಂಜಿ ಪುಷ್ಪಾವತ್ತಮ್ಮ, ಪ್ರಧಾನ ಕಾರ್ಯದರ್ಶಿ ಕಲಾವತಿ ಹಾಗೂ ಜಿಲ್ಲೆಯ ವಿವಿಧ ತಾಲೂಕಿನ ಸಿಐಟಿಯು ಮುಖಂಡರು ಮತ್ತು ಅಂಗನವಾಡಿ ನೌಕರರು ಭಾಗವಹಿಸಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

8 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

10 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

12 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

12 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

14 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

19 hours ago