ಬಿಕ್ಲು ಶಿವ ಕೊಲೆ ಕೇಸ್​: ಶಾಸಕ ಭೈರತಿ ಬಸವರಾಜ್​​ ಬಂಧನ

ಸೈಟ್ ವಿವಾದಕ್ಕೆ ಸಂಬಂಧಪಟ್ಟಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್​ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತನಿಖೆ ವೇಳೆ ಆರೋಪಿ ಜಗ್ಗ ಯಾರೆಂಬುದೇ ಗೊತ್ತಿಲ್ಲವೆಂದು ಭೈರತಿ ಬಸವರಾಜ್​ ಹೇಳಿದ ಸುಳ್ಳುಗಳೇ ಅವರಿಗೆ ಇದೀಗ ಮುಳುವಾಗಿವೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಂಡಿಗೋ – 6E683 ವಿಮಾನದಲ್ಲಿ ಅಹಮದಾಬಾದ್​​ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ ಎಂಬ ಮಾಹಿತಿ ಒದಗಿಬಂದಿದೆ…

Leave a Reply

Your email address will not be published. Required fields are marked *

error: Content is protected !!