ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಯಾರು ಕಪ್ ಗೆಲ್ಲುತ್ತಾರೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಹನುಮಂತ ಅವರು 5 ಕೋಟಿ ಮತಗಳನ್ನು ಪಡೆದು ವಿಜೇತರಾಗಿದ್ದಾರೆ.
ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಗೆದ್ದ ಮೊದಲ ಸ್ಪರ್ಧಿ ಎಂಬ ದಾಖಲೆಯನ್ನು ಅವರು ಸೃಷ್ಟಿಸಿದ್ದಾರೆ.
ಬಾರಿಯ ಬಿಗ್ ಬಾಸ್ನಲ್ಲಿ ಒಟ್ಟೂ 20 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಅವರಲ್ಲಿ 19 ಜನರನ್ನು ಹಿಂದಿಕ್ಕಿ ಹನುಮಂತ ಅವರು ಕಪ್ನ ಒಲಿಸಿಕೊಂಡಿದ್ದಾರೆ.
ಅಲ್ಟಿಮೇಟ್ ವಿನ್ನರ್ ಹನುಮಂತ ಲಮಾಣಿ
ಕುರಿಗಾಹಿ ಹನುಮಂತ ಲಮಾಣಿ ‘ಬಿಗ್ ಬಾಸ್ ಕನ್ನಡ 11’ ವಿನ್ನರ್ ಆಗಿದ್ದಾರೆ. ವಿಜೇತ ಹನುಮಂತ ಲಮಾಣಿಗೆ ವಿನ್ನರ್ ಟ್ರೋಫಿ ಜೊತೆಗೆ 50 ಲಕ್ಷ ರೂಪಾಯಿ ನಗದು ಬಹುಮಾನ ಲಭಿಸಿದೆ.