ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ ಮತ್ತು ಪರಿಸ್ಥಿತಿಗೆ ತಕ್ಕಂತೆ ಮಾತು ಬದಲಿಸುವುದು, ಸಿದ್ದಾಂತ ಬದಲಿಸುವುದು, ವರಸೆ ಬದಲಿಸುವುದು ಬಿಜೆಪಿಗರಿಗೆ ದೇವರು ನೀಡಿದ ವರ ಇರಬಹುದೇನೋ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯಗಳನ್ನಿಟ್ಟುಕೊಂಡು, ದಲಿತರಿಗೆ ಅನ್ಯಾಯ, ಒಬಿಸಿಗಳಿಗೆ ಅನ್ಯಾಯ ಎನ್ನುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ತಮ್ಮ ಆತ್ಮಸಾಕ್ಷಿಗೆ ಕೆಲ ಪ್ರಶ್ನೆಗಳನ್ನು ಕೇಳಿಕೊಂಡು ಆತ್ಮ ವಿಮರ್ಶೆ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?
ರಾಜ್ಯದಲ್ಲಿ ಬಿಜೆಪಿಯಿಂದ ಆಗಿರುವ ನಾಲ್ಕು ಮುಖ್ಯಮಂತ್ರಿಗಳಲ್ಲಿ ಎಷ್ಟು ಜನ ಒಬಿಸಿ, ದಲಿತರಿದ್ದಾರೆ?
ಮುಖ್ಯಮಂತ್ರಿಯಾಗಲು ಬಿಜೆಪಿ ಈ ಸಮುದಾಯಗಳ ನಾಯಕರನ್ನು ಬೆಳಸಲಿಲ್ಲವೇ ಅಥವಾ ಇರುವ ನಾಯಕರಿಗೆ ಅರ್ಹತೆ ಇಲ್ಲ ಎಂದು ತೀರ್ಮಾನಿಸಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಧಿಕಾರವಿದ್ದಾಗಿನ ಕತೆ ಆಯಿತು, ಈಗಲಾದರೂ ದಲಿತ, ಒಬಿಸಿಗಳು ನೆನಪಾಗಲಿಲ್ಲವೇ? ವಿಧಾನಸಭೆ ವಿಪಕ್ಷ ನಾಯಕನ ಸ್ಥಾನವನ್ನು ಏಕೆ ಒಬಿಸಿ ಸಮುದಾಯದವರಿಗೆ ಕೊಡಲಿಲ್ಲ? ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ದಲಿತರಿಗೆ ಏಕೆ ಕೊಡಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಹುದ್ದೆಯನ್ನು ದಲಿತರೊಬ್ಬರಿಗೆ ಬಿಟ್ಟುಕೊಡಲು ತಯಾರಿದ್ದಾರಾ?
ವಿಪಕ್ಷ ನಾಯಕರು ತಮ್ಮ ಸ್ಥಾನವನ್ನು ಒಬಿಸಿ ಸಮುದಾಯಕ್ಕೆ ತ್ಯಾಗ ಮಾಡಲು ತಯಾರಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ.

ದಲಿತ, ಒಬಿಸಿ ಸಮುದಾಯಗಳಿಗೆ ಜಗನ್ನಾಥ ಭವನದ ಹೊಸ್ತಿಲನ್ನು ದಾಟಲು ಬಿಡದ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕೆ ಸಾಮಾಜಿಕ ನ್ಯಾಯ, ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

◆ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದ ಅತಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಗಳಾಗಿ ದಾಖಲೆ ನಿರ್ಮಿಸಿದ ಶ್ರೀ ದೇವರಾಜ್ ಅರಸು, ಶ್ರೀ ಸಿದ್ದರಾಮಯ್ಯ ಇಬ್ಬರು ಮುಖ್ಯಮಂತ್ರಿಗಳು ಒಬಿಸಿ ಸಮುದಾಯದವರೇ.

◆ ಕಾಂಗ್ರೆಸ್ ಪಕ್ಷ ನಾಲ್ಕು ಹಿಂದುಳಿದ ವರ್ಗಗಳ ನಾಯಕರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದೆ.

◆ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯದವರಾದ ಶ್ರೀ ವೀರಪ್ಪ ಮೊಯ್ಲಿಯವರು ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಪಕ್ಷದಿಂದಲೇ.

◆ ಶ್ರೀ ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿ ಹಿಂದುಳಿದ ವರ್ಗದ ನೇತಾರರಾಗಿ ಹೊರಹೊಮ್ಮಿದ್ದು ಕಾಂಗ್ರೆಸ್ ಪಕ್ಷದಲ್ಲೇ.

◆ ಶೋಷಿತ ಸಮುದಾಯದಿಂದ ಬಂದಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಕಾಂಗ್ರೆಸ್ ಪಕ್ಷದಲ್ಲೇ.

ಪಕ್ಕದ ಮನೆಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವ ಬದಲು ಬಿಜೆಪಿ ತಮ್ಮ ತನುವ ಸಂತೈಸಿಕೊಳ್ಳಲಿ, ತಮ್ಮ ಮನೆಯ ಸಂಬಾಳಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

28 minutes ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

13 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

14 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

18 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

19 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

1 day ago