ಕೋಲಾರ: ಬಿಜೆಪಿಯವರು ಸುಳ್ಳಿನ ಜೊತೆಗೆ ಮೋಸ ಮಾಡಿ ಯಾಮಾರಿಸೋದರಲ್ಲಿ ನಿಸ್ಸೀಮರು ಇನ್ನೂ ಜೆಡಿಎಸ್ ನವರು ವೈಯಕ್ತಿಕ ವಿಚಾರದಲ್ಲಿ ಮುಳಗಿದ್ದಾರೆ. ಅವರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ತಿಳಿಸಿದರು.
ನಗರದ ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಸ್ಥಳೀಯ ಶಾಸಕರು ಹಾಗೂ ಕಾರ್ಯಕರ್ತರು ಹೆಚ್ಚು ದುಡಿದಿದ್ದಾರೆ ಅವರ ಶ್ರಮದಿಂದ ಕಾಂಗ್ರೆಸ್ ಗೆಲ್ಲಲಿದೆ. ಪೊಲೀಸ್ ವರದಿ ಕೂಡ ಅದನ್ನೇ ಹೇಳಿದೆ ನಾವು ಈ ಚುನಾವಣೆಯನ್ನು ಸಹ ಅದೇ ರೀತಿಯಲ್ಲಿ ಎದುರಿಸುತ್ತೇವೆ ಎಂದರು
ಸಚಿವ ಡಾ.ಎಂ.ಸಿ.ಸುಧಾಕರ್ ತಮ್ಮ ಮಗನ ಶಿಕ್ಷಣದ ಕೆಲಸದ ಮೇಲೆ ಅಮೆರಿಕಾಕ್ಕೆ ಹೋಗಿದ್ದಾರೆ. ಅವರನ್ನು ಬೇಗನೇ ಬರಲು ಹೇಳಿದ್ದೇನೆ. ಆದರೆ, ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಅವರಿಗೆ ಬೇರೆ ಕೆಲಸ ಇಲ್ಲ ದುಡ್ಡು ಕಾಸಿನಿಂದ ಚುನಾವಣೆ ನಡೆಯಲ್ಲ ಕಾರ್ಯಕರ್ತರ ಶ್ರಮದಿಂದ ಚುನಾವಣೆ ಎದುರಿಸೋಣ. ಡಿ.ಟಿ.ಶ್ರೀನಿವಾಸ್ ಬಹು ವರ್ಷಗಳ ಸ್ನೇಹಿತ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಅವರ ಗೆಲುವಿಗೆ ನಾವು ಎಲ್ಲರೂ ಒಗ್ಗಟ್ಟಿನಿಂದ ಸಹಕರಿಸಬೇಕು ಎಂದು ಹೇಳಿದರು.
ಕೋಲಾರದ ಜಿಲ್ಲೆಯ ಶಾಸಕರು ಪ್ರಾಮಾಣಿಕರು, ಬದ್ಧತೆ ಇರುವವರು. ರಾಜ್ಯದಲ್ಲಿ ಇವರಂಥ ಶಾಸಕರು ಎಲ್ಲೂ ಸಿಗಲ್ಲ. ದೇಶ ಒಡೆಯುತ್ತಿರುವುದು ಜಾತೀಯತೆ ಮಾಡುವುದರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಂಬರ್ ಒನ್ ದೇಶ ಉದ್ದಾರ ಮಾಡಲ್ಲ ಹಾಳು ಮಾಡಿದ್ದೇ ಅವರ ಸಾಧನೆ. ಕಾಂಗ್ರೆಸ್ ಪಕ್ಷವು ದೇಶ ಕಟ್ಟಿದೆ ಅನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಬೇಕು ಎಂದರು
ಈ ಸಂದರ್ಭದಲ್ಲಿ ಮಾಲೂರು ಶಾಸಕ ಕೆ.ವೈ ನಂಜೇಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷವು ಯಾವುದೇ ಚುನಾವಣೆಯ ಜವಾಬ್ದಾರಿಯನ್ನು ಕೊಟ್ಟರು ಪ್ರತಿಷ್ಠೆಯಾಗಿ ಚುನಾವಣೆಯನ್ನು ಎದುರಿಸಿದ್ದೇವೆ. ಮತದಾರರು ಸರಕಾರ ಪರವಾಗಿ ಇದ್ದು ಅವರನ್ನು ಸಂಪರ್ಕ ಮಾಡುವ ಕೆಲಸವನ್ನು ನಾವು ಎಲ್ಲರೂ ಸೇರಿ ಮಾಡಬೇಕು ಬಿಜೆಪಿ ಸರಕಾರದ ದೋರಣೆಗಳ ವಿರುದ್ದ ಮೇಲ್ಮನೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಬೇಕಾಗಿದೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನು ಕೂಡ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಿ ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು ಎಂದರು
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ, ಎಂಎಲ್ಸಿ ಚುನಾವಣೆಯಲ್ಲಿ ಒಂದು ಒಂದು ಮತವು ಮುಖ್ಯವಾಗಿದೆ. ಅವರನ್ನು ನೇರವಾಗಿ ಭೇಟಿ ಮಾಡಿ ಸರಕಾರದ ಯೋಜನೆಗಳ ಜೊತೆಗೆ ಶಿಕ್ಷಕರಿಗೆ ಆಗುವ ಪ್ರಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಮತ ಹಾಕುವಂತೆ ಮಾಡಬೇಕು. ಇದು ಶಿಕ್ಷಕರ ಚುನಾವಣೆ ಅಂತ ನಿರ್ಲಕ್ಷ್ಯ ಮಾಡದೇ ಪ್ರತಿಷ್ಠೆಯಾಗಿ ತೆಗೆದುಕೊಂಡು ಕಾಂಗ್ರೆಸ್ ಗೆಲ್ಲುವಂತೆ ಮಾಡಬೇಕು ಎಂದರು
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಈ ಕ್ಷೇತ್ರದ ವ್ಯಾಪ್ತಿಯು ಸುಮಾರು 5 ಜಿಲ್ಲೆಗಳಿಂದ 33 ಶಾಸಕರನ್ನು ಹೊಂದಿದೆ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಹಿಂದೆ ಆಯ್ಕೆಯಾದ ಎಂಎಲ್ಸಿ 18 ವರ್ಷಗಳಿಂದ ಅಧಿಕಾರದಲ್ಲಿ ಇದ್ದು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಿಲ್ಲ. ಇವತ್ತು ಬಿಜೆಪಿ ಜೆಡಿಎಸ್ ಪಕ್ಷಗಳು ಮೈತ್ರಿಕೂಟದಿಂದ ಅಭ್ಯರ್ಥಿಯಾಗಿದ್ದಾರೆ. ಎಚ್ಚರಿಕೆಯಿಂದ ಚುನಾವಣೆ ಎದುರಿಸಬೇಕು ಎಂದರು
ಈ ಸಂದರ್ಭದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್, ಅಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್, ಮಾಜಿ ಶಾಸಕ ಕೆಪಿಸಿಸಿ ಉಸ್ತುವಾರಿ ವೆಂಕಟರಮಣಪ್ಪ, ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹರ್ಷದ್ ಉಲ್ಲಾ ಖಾನ್, ಶ್ರೀಧರ್, ಕಾರ್ಯದರ್ಶಿ ಕಾರ್ತಿಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ಆದಿನಾರಾಯಣ, ರತ್ನಮ್ಮ, ಜಯದೇವ್, ಮುಂತಾದವರು ಇದ್ದರು
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…