Categories: ಕೋಲಾರ

ಬಿಜೆಪಿಗೆ ಸುಳ್ಳೇ ಬಂಡವಾಳ, ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ – ಬೈರತಿ ಸುರೇಶ್

ಕೋಲಾರ: ಬಿಜೆಪಿಯವರು ಸುಳ್ಳಿನ ಜೊತೆಗೆ ಮೋಸ ಮಾಡಿ ಯಾಮಾರಿಸೋದರಲ್ಲಿ ನಿಸ್ಸೀಮರು ಇನ್ನೂ ಜೆಡಿಎಸ್ ನವರು ವೈಯಕ್ತಿಕ ವಿಚಾರದಲ್ಲಿ ಮುಳಗಿದ್ದಾರೆ. ಅವರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ತಿಳಿಸಿದರು.

ನಗರದ ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ‌‌ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಸ್ಥಳೀಯ ಶಾಸಕರು ಹಾಗೂ ಕಾರ್ಯಕರ್ತರು ಹೆಚ್ಚು ದುಡಿದಿದ್ದಾರೆ‌‌ ಅವರ ಶ್ರಮದಿಂದ ಕಾಂಗ್ರೆಸ್ ಗೆಲ್ಲಲಿದೆ‌. ಪೊಲೀಸ್ ವರದಿ ಕೂಡ ಅದನ್ನೇ ಹೇಳಿದೆ ನಾವು ಈ ಚುನಾವಣೆಯನ್ನು ಸಹ ಅದೇ ರೀತಿಯಲ್ಲಿ ಎದುರಿಸುತ್ತೇವೆ ಎಂದರು

ಸಚಿವ ಡಾ.ಎಂ.ಸಿ.ಸುಧಾಕರ್ ತಮ್ಮ ಮಗನ ಶಿಕ್ಷಣದ ಕೆಲಸದ ಮೇಲೆ ಅಮೆರಿಕಾಕ್ಕೆ ಹೋಗಿದ್ದಾರೆ. ಅವರನ್ನು ಬೇಗನೇ ಬರಲು ಹೇಳಿದ್ದೇನೆ. ಆದರೆ, ಬಿಜೆಪಿ ‌ಅಪಪ್ರಚಾರ ಮಾಡುತ್ತಿದೆ. ಅವರಿಗೆ ಬೇರೆ ಕೆಲಸ ಇಲ್ಲ ದುಡ್ಡು ಕಾಸಿನಿಂದ ಚುನಾವಣೆ ನಡೆಯಲ್ಲ ಕಾರ್ಯಕರ್ತರ ಶ್ರಮದಿಂದ ಚುನಾವಣೆ ಎದುರಿಸೋಣ. ಡಿ.ಟಿ.ಶ್ರೀನಿವಾಸ್ ಬಹು ವರ್ಷಗಳ ಸ್ನೇಹಿತ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಅವರ ಗೆಲುವಿಗೆ ನಾವು ಎಲ್ಲರೂ ಒಗ್ಗಟ್ಟಿನಿಂದ ಸಹಕರಿಸಬೇಕು ಎಂದು ಹೇಳಿದರು.

ಕೋಲಾರದ ಜಿಲ್ಲೆಯ ಶಾಸಕರು ಪ್ರಾಮಾಣಿಕರು‌,‌ ಬದ್ಧತೆ ಇರುವವರು‌‌‌. ರಾಜ್ಯದಲ್ಲಿ ಇವರಂಥ ಶಾಸಕರು ಎಲ್ಲೂ ಸಿಗಲ್ಲ. ದೇಶ ಒಡೆಯುತ್ತಿರುವುದು ಜಾತೀಯತೆ ‌ಮಾಡುವುದರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಂಬರ್ ಒನ್ ದೇಶ ಉದ್ದಾರ ಮಾಡಲ್ಲ ಹಾಳು ಮಾಡಿದ್ದೇ ಅವರ ಸಾಧನೆ. ಕಾಂಗ್ರೆಸ್ ಪಕ್ಷವು ದೇಶ ಕಟ್ಟಿದೆ ಅನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಬೇಕು ಎಂದರು

ಈ ಸಂದರ್ಭದಲ್ಲಿ ಮಾಲೂರು ಶಾಸಕ ಕೆ.ವೈ ನಂಜೇಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷವು ಯಾವುದೇ ಚುನಾವಣೆಯ ಜವಾಬ್ದಾರಿಯನ್ನು ಕೊಟ್ಟರು ಪ್ರತಿಷ್ಠೆಯಾಗಿ ಚುನಾವಣೆಯನ್ನು ಎದುರಿಸಿದ್ದೇವೆ. ಮತದಾರರು ಸರಕಾರ ಪರವಾಗಿ ಇದ್ದು ಅವರನ್ನು ಸಂಪರ್ಕ ಮಾಡುವ ಕೆಲಸವನ್ನು ನಾವು ಎಲ್ಲರೂ ಸೇರಿ ಮಾಡಬೇಕು ಬಿಜೆಪಿ ಸರಕಾರದ ದೋರಣೆಗಳ ವಿರುದ್ದ ಮೇಲ್ಮನೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಬೇಕಾಗಿದೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನು ಕೂಡ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಿ ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು ಎಂದರು

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ, ಎಂಎಲ್ಸಿ ಚುನಾವಣೆಯಲ್ಲಿ ಒಂದು ಒಂದು ಮತವು ಮುಖ್ಯವಾಗಿದೆ. ಅವರನ್ನು ನೇರವಾಗಿ ಭೇಟಿ ಮಾಡಿ ಸರಕಾರದ ಯೋಜನೆಗಳ ಜೊತೆಗೆ ಶಿಕ್ಷಕರಿಗೆ ಆಗುವ ಪ್ರಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಮತ ಹಾಕುವಂತೆ ಮಾಡಬೇಕು. ಇದು ಶಿಕ್ಷಕರ ಚುನಾವಣೆ ಅಂತ ನಿರ್ಲಕ್ಷ್ಯ ಮಾಡದೇ ಪ್ರತಿಷ್ಠೆಯಾಗಿ ತೆಗೆದುಕೊಂಡು ಕಾಂಗ್ರೆಸ್ ಗೆಲ್ಲುವಂತೆ ಮಾಡಬೇಕು ಎಂದರು

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಈ ಕ್ಷೇತ್ರದ ವ್ಯಾಪ್ತಿಯು ಸುಮಾರು 5 ಜಿಲ್ಲೆಗಳಿಂದ 33 ಶಾಸಕರನ್ನು ಹೊಂದಿದೆ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಹಿಂದೆ ಆಯ್ಕೆಯಾದ ಎಂಎಲ್ಸಿ 18 ವರ್ಷಗಳಿಂದ ಅಧಿಕಾರದಲ್ಲಿ ಇದ್ದು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಿಲ್ಲ. ಇವತ್ತು ಬಿಜೆಪಿ ಜೆಡಿಎಸ್‌ ಪಕ್ಷಗಳು ಮೈತ್ರಿಕೂಟದಿಂದ ಅಭ್ಯರ್ಥಿಯಾಗಿದ್ದಾರೆ. ಎಚ್ಚರಿಕೆಯಿಂದ ಚುನಾವಣೆ ಎದುರಿಸಬೇಕು ಎಂದರು

ಈ ಸಂದರ್ಭದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್, ಅಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್, ಮಾಜಿ ಶಾಸಕ ಕೆಪಿಸಿಸಿ ಉಸ್ತುವಾರಿ ವೆಂಕಟರಮಣಪ್ಪ, ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹರ್ಷದ್ ಉಲ್ಲಾ ಖಾನ್, ಶ್ರೀಧರ್, ಕಾರ್ಯದರ್ಶಿ ಕಾರ್ತಿಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ಆದಿನಾರಾಯಣ, ರತ್ನಮ್ಮ, ಜಯದೇವ್, ಮುಂತಾದವರು ಇದ್ದರು

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

7 minutes ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

4 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

6 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

6 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

8 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

11 hours ago