ಕೋಲಾರ: ಬಿಜೆಪಿ ಪಕ್ಷದಂತೆ ಸುಳ್ಳು ಪಳ್ಳು ಹೇಳಿಕೊಂಡು ಗಿಮಿಕ್ ಮಾಡೋ ಪಕ್ಷ ಕಾಂಗ್ರೆಸ್ ಅಲ್ಲ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ ಮಂಡಳಿ ಅಧ್ಯಕ್ಷ ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ತಿಳಿಸಿದರು.
ತಾಲೂಕಿನ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಹುತ್ತೂರು ಗ್ರಾಮದಲ್ಲಿ ಸೋಮವಾರ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಹೋಬಳಿ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇಂದ್ರದಲ್ಲಿ ಬಿಜೆಪಿ ಪಕ್ಷವು ಹತ್ತು ವರ್ಷಗಳ ಹಿಂದೆ ಘೋಷಣೆ ಮಾಡಿದ ಒಂದಾದರೂ ಗ್ಯಾರಂಟಿ ಜಾರಿ ಮಾಡಿದ್ದಾರಾ ನಾವು ಅಧಿಕಾರಕ್ಕೆ ಬಂದ ಹತ್ತು ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿ ಜನರ ವಿಶ್ವಾಸ ಗಳಿಸಿದ್ದೇವೆ ಇದಕ್ಕೆ ಕಾರಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎಂದರು.
ಕಾಂಗ್ರೆಸ್ ಪಕ್ಷದ ಹತ್ತು ತಿಂಗಳ ಸಾಧನೆಗಳ ಜೊತೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿರುವವರನ್ನು ಗುರುತಿಸಿ ಯೋಜನೆಯ ಫಲಾನುಭವಿಗಳಾಗಿ ಮಾಡಬೇಕು ಇದಕ್ಕೆ ಪಂಚಾಯತಿ ಮಟ್ಟದಿಂದ ಗ್ರಾಮಗಳಲ್ಲಿ ಮಾಹಿತಿ ಪಡೆದು ಕೂಡಲೇ ನೋಂದಣಿ ಮಾಡಿಸಬೇಕು ಕಾಂಗ್ರೆಸ್ ಅಭಿವೃದ್ಧಿಯ ಜೊತೆಗೆ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಸರಕಾರವಾಗಿದೆ ಎಂದರು.
ಕೇಂದ್ರ ಸರ್ಕಾರದಿಂದ ಬಡವರು ಉದ್ದಾರವಾಗಿಲ್ಲ ಬರಿ ಶ್ರೀಮಂತರು ಅಷ್ಟೇ ಅಭಿವೃದ್ಧಿಯಾಗಿದ್ದಾರೆ ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿಗೆ ಅಧ್ಯತೆಯಿಲ್ಲದೇ ಕೇವಲ ಶ್ರೀರಾಮ ಹೆಸರಿನಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ ಬಿಜೆಪಿಗೆ ಶ್ರೀರಾಮ ಮಾತ್ರ ಬೇಕು ಕಾಂಗ್ರೆಸ್ ಪಕ್ಷಕ್ಕೆ ಜಾತಿ ಧರ್ಮವಿಲ್ಲದೇ ಎಲ್ಲಾ ದೇವತೆಗಳು ಬೇಕಾಗಿದೆ ಜಿಲ್ಲೆಯಲ್ಲಿ ಒಬ್ಬ ಐದು ವರ್ಷಗಳ ಕಾಲ ಜನರನ್ನು ಯಾಮಾರಿಸಿ ಎಂಪಿಯಾಗಿ ಯಾವುದೇ ಅಭಿವೃದ್ಧಿ ಮಾಡಿಲ್ಲ ಬರೀ ಜಾತಿ ಧರ್ಮಗಳ ಮಧ್ಯೆ ಬೆಂಕಿ ಹಂಚಿದ್ದೇ ಅಯಿತು ಮುಂದೆ ಅಂತಹ ತಪ್ಪು ಮಾಡಿಕೊಳ್ಳದೇ ಯಾರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೂ ನಮ್ಮ ಪಕ್ಷದ ಸಂಸದ ಆಯ್ಕೆಯಾಗುವಂತೆ ಮಾಡಿಕೊಳ್ಳೋಣ ಎಂದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಹಾಗೂ ವಿವಿಧ ಇಲಾಖೆಗಳಲ್ಲಿ ಆಯ್ಕೆಯಾದವರಿಗೆ ಯಂತ್ರೋಪಕರಣಗಳನ್ನು ವಿತರಿಸಿದರು.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…