ಬಿಜೆಪಿಯವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು-  ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಎಂದೂ ಬಂದವರಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ

ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಎರಡು ವರ್ಷದಲ್ಲಿ ಗ್ಯಾರೆಂಟಿ ಯೋಜನೆಗಳಿಗೆ 80 ಸಾವಿರ ಕೋಟಿ ಖರ್ಚು ಮಾಡಿದ್ದೇವೆ‌. ನಮ್ಮ ಮೇಲೆ ಬಿಜೆಪಿ ಟೀಕೆ ಮಾಡುತ್ತಿವೆ‌. ಏನೆಂದರೆ ಗ್ಯಾರೆಂಟಿ ಯೋಜನೆಗಳಿಗೆ ಹಣ ವಿನಿಯೋಗಿಸಿ ಸರ್ಕಾರ ಪಾಪರ್ ಆಗಿದೆ ಎಂದು ಟೀಕೆ ಮಾಡುತ್ತಿದೆ. ಅವರ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಸಿಎ‌ಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಜನರ ಮುಂದೆ ಸುಳ್ಳು ಹೇಳಿಕೊಂಡು ಇದೆ‌. ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ…ಮಾಡಿ…ಮಾಡಿ ಜನರ ಜೀವನಕ್ಕೆ ಕುತ್ತು ತರುತ್ತಿದೆ, ಬೆಲೆ ಏರಿಕೆಗೆ ನೇರ ಹೊಣೆ ಪ್ರಧಾನಿ ಮೋದಿಯೇ ಕಾರಣ ಎಂದು ಬಿಜೆಪಿ ವಿರುದ್ಧ ಗುಡುಗಿದರು.

ಬಿಜೆಪಿಯವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದರು. ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದವರಲ್ಲ.

ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ.

ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು.

ಪಹಲ್ಗಾಮ್ ನಲ್ಲಿ ನಡೆದ ಪಾಕ್‍ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ.

ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎನ್ನುವ ಭರವಸೆ ನಮಗಿದೆ. ಅವುಗಳನ್ನೆಲ್ಲ ಬಹಿರಂಗ ಪಡಿಸುವ ಅಗತ್ಯವಿಲ್ಲ. ಅಂತಹ ಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ.

ಇದೇ ವೇಳೆ ಕೆಲವು ಕಿಡಿಗೇಡಿಗಳು ಯುದ್ಧೋನ್ಮಾದವನ್ನು ಸೃಷ್ಟಿಸಿ ದೇಶದೊಳಗಿನ ಸೌಹಾರ್ದತೆಯನ್ನು ಕಲಕುವ ಪ್ರಯತ್ನ ಮಾಡುತ್ತಿದ್ದು ಇಂತಹವರ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಇಂದು ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಾಹ್ಯ ಶತ್ರುವನ್ನು ಎದುರಿಸಬೇಕಾದರೆ ಆಂತರಿಕವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕಾಗುತ್ತದೆ.

ಪಾಕಿಸ್ತಾನ ಇಂದು ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶವಾಗಿದೆ. ಅವರು ಕಳೆದುಕೊಳ್ಳುವುದೇನೂ ಇಲ್ಲ, ಈ ಕಾರಣದಿಂದಾಗಿಯೇ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾಗಿದೆ. ಈ ಸಂದರ್ಭದಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳು ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಖಂಡಿಸಿ ಭಾರತದ ಪರವಾಗಿ ನಿಂತಿವೆ. ಈ ಬೆಳವಣಿಗೆಯನ್ನು ಭಾರತ ಸದುಪಯೋಗಪಡಿಸಿಕೊಂಡು ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಾಗಿದೆ.

ಒಂದು ಲಕ್ಷದ 33 ಸಾವಿರ ಕೋಟಿ ಅನುದಾನವನ್ನು ಅಭಿವೃದ್ಧಿ ‌ಕೆಲಸಗಳಿಗೆ ಸರ್ಕಾರ ಇಟ್ಟಿದೆ. ನಮ್ಮ ಸರ್ಕಾರ ಅಭಿವೃದ್ಧಿ ಮಾಡುವಲ್ಲಿ ಹಿಂದೂ ಮುಂದು ನೋಡುವುದಿಲ್ಲ ಎಂದರು.

Ramesh Babu

Journalist

Recent Posts

3.75 ಲಕ್ಷ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ: ಇ-ಕೆವೈಸಿಗೆ ಅ.20ರ ಗಡುವು: ಗಡುವು ವಿಸ್ತರಣೆಯಿಂದ ಫಲಾನುಭವಿಗಳಿಗೆ ಕೊಂಚ ನಿರಾಳ

ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…

51 minutes ago

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

11 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

12 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

1 day ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

1 day ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

1 day ago