Categories: ಮೈಸೂರು

ಬಿಜೆಪಿಯ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ?- ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ:

ಹಿಂದೆ ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಸಿಬಿಐ ತನಿಖೆಗೆ ಕೊಟ್ಟಿದ್ದರೆ ಈಗ ನಮ್ಮನ್ನು ಕೇಳಬಹುದಿತ್ತು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರ ಪ್ರತಿಕ್ರಿಯಿಸಿದರು.

ಶ್ರೀರಾಮುಲು, ಜನಾರ್ಧನ ರೆಡ್ಡಿಯವರು ಕಾಂಗ್ರೆಸ್ ನಾಯಕರ ಬಗ್ಗೆ ತುಚ್ಛವಾಗಿ ಮಾತನಾಡುತ್ತಾರೆ. ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಈ ಬಗ್ಗೆ ವರದಿ ಕೊಟ್ಟಿದ್ದರು ಎಂದರು.

ಲೋಕಸಭಾ ಚುನಾವಣೆ ಪ್ರಚಾರಕ್ಕೆ ಹೋದಾಗ ಬಳ್ಳಾರಿಯಲ್ಲಿ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು‌ ಎಂದು ಹೇಳಿದರು.

ಸಂಸದೀಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಬಿಜೆಪಿಯ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ? ಎಂದು ಪ್ರಶ್ನೆ ಮಾಡಿದರು.

ಸಂವಿಧಾನದ ನಿಯಮಗಳಡಿ ಅಧಿವೇಶನ ಕರೆಯಲಾಗಿದೆ:

ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಅದಕ್ಕಾಗಿ ಕರೆದಿದ್ದೇವೆ. ಇದು ಅಧಿಕಾರ ದುರ್ಬಳಕೆ ಹೇಗಾಗುತ್ತದೆ? ಎಂದು ಪ್ರಶ್ನಿಸಿದರು.

ಮನರೇಗಾ ಮೂಲಕ ಉದ್ಯೋಗ ಖಾತ್ರಿ, ಶಿಕ್ಷಣ, ಮಾಹಿತಿ ಹಕ್ಕು ಆಹಾರ ಭದ್ರತೆ ತಂದದ್ದು ಯುಪಿಎ ಸರ್ಕಾರ. ಅದನ್ನು ಹಾಳು ಮಾಡಲು ಹೊರಟಿಸುವುದನ್ನು ಖಂಡಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ವಿಬಿ ಗ್ರಾಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಜೀವಿಕ ಮಿಷನ್ ಗ್ರಾಮೀಣ) ಎನ್ನುವುದು ಇದರ ಅರ್ಥ. ಕಾರ್ಯಕ್ರಮವನ್ನು ರದ್ದು ಮಾಡಬೇಕೆಂದು ಒತ್ತಾಯಿಸಲಾಗುತ್ತಿದೆ ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

5 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

8 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

16 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

21 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

23 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago