Categories: ಕೋಲಾರ

ಬಿಜೆಪಿಯ ಮಹಾಸಂಪರ್ಕ ಅಭಿಯಾನ 50 ಸಾವಿರ ಸದಸ್ಯತ್ವ ಗುರಿ- ಓಂಶಕ್ತಿ ಚಲಪತಿ

ಕೋಲಾರ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಸದಸ್ಯತ್ವ ಮಾಡಿಸುವ ಜೊತೆಗೆ ಮಹಾಸಂಪರ್ಕ ಅಭಿಯಾನವನ್ನು ನಡೆಸಲಾಗುತ್ತಿದ್ದು ಇದಕ್ಕೆ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ತಾಲೂಕಿನ ನರಸಾಪುರ ಭಾಗದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಮಹಾಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ 10 ಸಾವಿರ ಬಿಜೆಪಿ ಪಕ್ಷದ ಸದಸ್ಯತ್ವವನ್ನು ನೋಂದಣಿ ಮಾಡಿಸಲಾಗಿದೆ 50 ಸಾವಿರ ಗುರಿಯನ್ನು ಹೊಂದಿದ್ದು ನಗರ ಭಾಗದಲ್ಲಿ ಹೆಚ್ಚು ಕ್ರಿಯಾಶೀಲವಾದ ಚಟುವಟಿಕೆಗಳನ್ನು ನಡೆಯತ್ತಿದ್ದು ಗ್ರಾಮೀಣ ಭಾಗದಲ್ಲಿ ಪಕ್ಷವನ್ನು ಬಲಪಡಿಸಲಾಗುತ್ತಾ ಇದ್ದು ಅದರಿಂದಲೇ ಪ್ರತಿ ಗ್ರಾಮದಲ್ಲಿ ಈ ಅಭಿಯಾನ ನಡೆಯಲಿದ್ದು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಮನವಿ ಮಾಡಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತ ಸ್ವಾವಲಂಬಿ, ಸದೃಢ, ಸಶಕ್ತ ದೇಶವಾಗಿದ್ದು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ ಕೋವಿಡ್ ನಿರ್ವಹಣೆಯಲ್ಲಿ ಸವಾಲನ್ನು ಸ್ವೀಕರಿಸಿ ಉತ್ತಮ ರೀತಿಯಲ್ಲಿ ನಿರ್ವಹಿಸು ಜತೆಗೆ ದೇಶದ ಜನರಿಗೆ ಆರ್ಥಿಕ ಮತ್ತು ವೈದ್ಯಕೀಯ ನೆರವು ನೀಡಿದ್ದಾರೆ ಗರೀಬ್‌ ಕಲ್ಯಾಣ ಯೋಜನೆ, ದೂರದರ್ಶಿತ್ವದೊಂದಿಗೆ ಬಿತ್ತಿರುವ ಆತ್ಮ ನಿರ್ಭರ ಭಾರತದ ಚಿಂತನೆಗಳು ದೇಶವನ್ನು ಸಂಕಷ್ಟದಿಂದ ಪಾರು ಮಾಡಬಲ್ಲದೆಂಬ ವಿಶ್ವಾಸ ಮೂಡಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯತ್ವವನ್ನು ಪಡೆಯಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಪಕ್ಷವು ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ ಮುಂಬರುವ ಎಲ್ಲಾ ಚುನಾವಣೆಗಳ ಹಿನ್ನಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಈಗಿನಿಂದಲೂ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಪಕ್ಷವನ್ನು ಸಂಘಟಿಸಿ ಅದಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮುರಗೇಶ್, ನಾಗರಾಜ್, ಉಮೇಶ್, ಮಂಜುನಾಥ್, ಸರ್ವೇಶ್,ಮಧು, ಶ್ರೀರಾಮ್, ಮುಂತಾದವರು ಇದ್ದರು.

Ramesh Babu

Journalist

Recent Posts

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

4 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

8 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

18 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

22 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago