ಕೋಲಾರ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಸದಸ್ಯತ್ವ ಮಾಡಿಸುವ ಜೊತೆಗೆ ಮಹಾಸಂಪರ್ಕ ಅಭಿಯಾನವನ್ನು ನಡೆಸಲಾಗುತ್ತಿದ್ದು ಇದಕ್ಕೆ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ತಾಲೂಕಿನ ನರಸಾಪುರ ಭಾಗದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಮಹಾಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ 10 ಸಾವಿರ ಬಿಜೆಪಿ ಪಕ್ಷದ ಸದಸ್ಯತ್ವವನ್ನು ನೋಂದಣಿ ಮಾಡಿಸಲಾಗಿದೆ 50 ಸಾವಿರ ಗುರಿಯನ್ನು ಹೊಂದಿದ್ದು ನಗರ ಭಾಗದಲ್ಲಿ ಹೆಚ್ಚು ಕ್ರಿಯಾಶೀಲವಾದ ಚಟುವಟಿಕೆಗಳನ್ನು ನಡೆಯತ್ತಿದ್ದು ಗ್ರಾಮೀಣ ಭಾಗದಲ್ಲಿ ಪಕ್ಷವನ್ನು ಬಲಪಡಿಸಲಾಗುತ್ತಾ ಇದ್ದು ಅದರಿಂದಲೇ ಪ್ರತಿ ಗ್ರಾಮದಲ್ಲಿ ಈ ಅಭಿಯಾನ ನಡೆಯಲಿದ್ದು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಮನವಿ ಮಾಡಿದರು.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತ ಸ್ವಾವಲಂಬಿ, ಸದೃಢ, ಸಶಕ್ತ ದೇಶವಾಗಿದ್ದು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ ಕೋವಿಡ್ ನಿರ್ವಹಣೆಯಲ್ಲಿ ಸವಾಲನ್ನು ಸ್ವೀಕರಿಸಿ ಉತ್ತಮ ರೀತಿಯಲ್ಲಿ ನಿರ್ವಹಿಸು ಜತೆಗೆ ದೇಶದ ಜನರಿಗೆ ಆರ್ಥಿಕ ಮತ್ತು ವೈದ್ಯಕೀಯ ನೆರವು ನೀಡಿದ್ದಾರೆ ಗರೀಬ್ ಕಲ್ಯಾಣ ಯೋಜನೆ, ದೂರದರ್ಶಿತ್ವದೊಂದಿಗೆ ಬಿತ್ತಿರುವ ಆತ್ಮ ನಿರ್ಭರ ಭಾರತದ ಚಿಂತನೆಗಳು ದೇಶವನ್ನು ಸಂಕಷ್ಟದಿಂದ ಪಾರು ಮಾಡಬಲ್ಲದೆಂಬ ವಿಶ್ವಾಸ ಮೂಡಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯತ್ವವನ್ನು ಪಡೆಯಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಪಕ್ಷವು ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ ಮುಂಬರುವ ಎಲ್ಲಾ ಚುನಾವಣೆಗಳ ಹಿನ್ನಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಈಗಿನಿಂದಲೂ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಪಕ್ಷವನ್ನು ಸಂಘಟಿಸಿ ಅದಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮುರಗೇಶ್, ನಾಗರಾಜ್, ಉಮೇಶ್, ಮಂಜುನಾಥ್, ಸರ್ವೇಶ್,ಮಧು, ಶ್ರೀರಾಮ್, ಮುಂತಾದವರು ಇದ್ದರು.
ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…
ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…