ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗುತ್ತಿದ್ದಂತೆ ಡಾ.ಕೆ.ಸುಧಾಕರ್ ಅವರು ಟೆಂಪಲ್ ರನ್ ಆರಂಭಿಸಿದ್ದಾರೆ.
ಸೋಮವಾರವಷ್ಟೇ ತೂಬಗೆರೆಯ ಪ್ರಸನ್ನ ಲಕ್ಷ್ಮಿವೆಂಕಟರಮಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದ ಸುಧಾಕರ್, ಇಂದು ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಧಾವಿಸಿ ವಿಶೇಷ ಪೂಜೆ ಸಲ್ಲಿಸಿದರು.
ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ಮನೆಗಳಿಗೆ ಭೇಟಿ ನೀಡುವ ಮೂಲಕ ಪ್ರಚಾರ ಕೂಡ ಆರಂಭಿಸಿದ್ದಾರೆ.
ಘಾಟಿ ಸುಬ್ರಹ್ಮಣ್ಯದಿಂದ ದೊಡ್ಡಬಳ್ಳಾಪುರಕ್ಕೆ ಆಗಮಿಸಲಿರುವ ಅವರು, ನೆಲದಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಪ್ರಚಾರ ಆರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ
ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ವಾಗತಿಸಲು ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಸಜ್ಜಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯ ಜೊತೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಸೇರಿದಂತೆ ತಾಲೂಕು ಹಾಗೂ ಹೋಬಳಿ ಮುಖಂಡರು ಇದ್ದರು.
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…