ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಟೆಂಪಲ್‌ ರನ್: ಇಂದಿನಿಂದಲೇ ಪ್ರಚಾರ ಕೈಗೊಳ್ಳುವ ಸಾಧ್ಯತೆ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ  ಬಿಜೆಪಿ ಅಭ್ಯರ್ಥಿಯಾಗುತ್ತಿದ್ದಂತೆ ಡಾ.ಕೆ.ಸುಧಾಕರ್ ಅವರು ಟೆಂಪಲ್ ರನ್‌ ಆರಂಭಿಸಿದ್ದಾರೆ.

ಸೋಮವಾರವಷ್ಟೇ ತೂಬಗೆರೆಯ ಪ್ರಸನ್ನ ಲಕ್ಷ್ಮಿವೆಂಕಟರಮಣಸ್ವಾಮಿ ದೇವಾಲಯಕ್ಕೆ ಭೇಟಿ‌ ನೀಡಿ ಸ್ವಾಮಿಯ ದರ್ಶನ ಪಡೆದ ಸುಧಾಕರ್, ಇಂದು ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ‌ ದೇವಾಲಯಕ್ಕೆ ಧಾವಿಸಿ ವಿಶೇಷ ಪೂಜೆ ಸಲ್ಲಿಸಿದರು.

ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ಮನೆಗಳಿಗೆ ಭೇಟಿ‌ ನೀಡುವ ಮೂಲಕ ಪ್ರಚಾರ‌ ಕೂಡ ಆರಂಭಿಸಿದ್ದಾರೆ.

ಘಾಟಿ ಸುಬ್ರಹ್ಮಣ್ಯದಿಂದ ದೊಡ್ಡಬಳ್ಳಾಪುರಕ್ಕೆ ಆಗಮಿಸಲಿರುವ ಅವರು, ನೆಲದ‌ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಪ್ರಚಾರ ಆರಂಭಿಸಲಿದ್ದಾರೆ ಎಂದು‌ ಮೂಲಗಳು ತಿಳಿಸಿವೆ

ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ಸ್ವಾಗತಿಸಲು ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಸಜ್ಜಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯ ಜೊತೆ ದೊಡ್ಡಬಳ್ಳಾಪುರ ಶಾಸಕ‌ ಧೀರಜ್ ಮುನಿರಾಜು ಸೇರಿದಂತೆ ತಾಲೂಕು ಹಾಗೂ ಹೋಬಳಿ ಮುಖಂಡರು ಇದ್ದರು.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

9 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

15 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

19 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

20 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago